ಸಿದ್ದರಾಮಯ್ಯರ ಸರಕಾರ ದಲಿತ ವಿರೋಧಿ: ಗೋವಿಂದ ಕಾರಜೋಳ
ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆ ಹಣವನ್ನು ವಾಪಸ್ ಕೊಟ್ಟು ದಲಿತರ ಶಿಕ್ಷಣ, ಉದ್ಯೋಗ…