36 C
Hubli
ಏಪ್ರಿಲ್ 27, 2024
eNews Land
ರಾಜ್ಯ ಸುದ್ದಿ

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು; ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಇಎನ್ಎಲ್ ಶಿವಮೊಗ್ಗ: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಭದ್ರಾವತಿ ಹೆಲಿಪ್ಯಾಡ್ ಬೊಮ್ಮನಕಟ್ಟೆ ಹತ್ತಿರ ಮಾಧ್ಯಮದವರೊಂದಿಗೆ ಮಾತನಾಡಿದರು.

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

Related posts

ಆಡುವಾಗ ಗೆಲ್ಲಲೆಂದೇ ಆಡಬೇಕು: ಸಿಎಂ ಬೊಮ್ಮಾಯಿ

eNEWS LAND Team

ಹಿರಿಯರ ಸಮಸ್ಯೆ ಪರಿಹಾರಕ್ಕೆ “ಅನ್ವಯಾ” ಚಾಯ್ ಪೇ ಚರ್ಚಾ

eNEWS LAND Team

ಜೋಗದ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

eNewsLand Team