26.7 C
Hubli
ಮೇ 17, 2024
eNews Land
ಸಣ್ಣ ಸುದ್ದಿ

ವಿದ್ಯಾರ್ಥಿಗಳಿಗೆ ಬಸ್‍ಪಾಸ್‍ಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಇಎನ್ಎಲ್ ಬೆಂಗಳೂರು: ವಿದ್ಯಾರ್ಥಿಗಳಿಗೆ ಬಸ್ ಪಾಸ್‍ಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಲು ಜೂನ್ 12 ರಿಂದ ಗೋ-ಲೈವ್ ನೀಡಿ ಅವಕಾಶ ಕಲ್ಪಿಸಲಾಗಿರುತ್ತದೆ. ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ / ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ (2022-23) ಬಸ್ ಪಾಸ್‍ನೊಂದಿಗೆ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ /ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿ ಹಾಜರುಪಡಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ / ಕಾಲೇಜುಗಳಿಗೆ ಉಚಿತವಾಗಿ ತೆರಳಲು “30ನೇ ಜೂನ್ 2023ರವರೆಗೆ” ಅನುವು ಮಾಡಲಾಗಿದೆ.

ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರು ರಾಜ್ಯದೊಳಗೆ ಪ್ರಯಾಣಿಸುವಾಗ ಸರ್ಕಾರದಿಂದ ವಿತರಿಸಿರುವ ಯಾವುದಾದರೂ ಗುರುತಿನ ಚೀಟಿಯನ್ನು ತೋರಿಸಿ ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಬೇಕಿರುತ್ತದೆ. ವಿದ್ಯಾರ್ಥಿಗಳು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

eNEWS LAND Team

ತುಪ್ಪದಕುರಹಟ್ಟಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ

eNewsLand Team

ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ ಪರ ಮತಯಾಚನೆ

eNEWS LAND Team