27.2 C
Hubli
ಮೇ 20, 2024
eNews Land
ರಾಜ್ಯ

ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಸಿದ್ದರಾಮಯ್ಯ ಅಭಯ

ಇಎನ್ಎಲ್ ಬೆಂಗಳೂರು:

ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.

ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಹಾಗೂ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Related posts

ಇದು ಅತ್ಯಂತ ಬಡ ರಾಜ್ಯ, ಕರ್ನಾಟಕದ ಬಡ ಜಿಲ್ಲೆ ಯಾವ್ದು ಗೊತ್ತೆ?

eNewsLand Team

ನೈಋತ್ಯ ರೈಲುಗಳ ಸೇವೆ ರದ್ದತಿ

eNEWS LAND Team

ಹುಬ್ಬಳ್ಳಿ ಈ ಸಂಸ್ಥೆಗೆ ಪ್ರತಿಷ್ಠಿತ ಪ್ರಶಸ್ತಿ..? ಯಾವ್ದು ಗೊತ್ತಾ!!

eNewsLand Team