35 C
Hubli
ಮೇ 1, 2024
eNews Land
ರಾಜ್ಯ

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ : ಸಿ.ಎಂ.

*ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ : ಸಿ.ಎಂ.

ಇಎನ್ಎಲ್ ಅ.16:

ಮೈಸೂರು,
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂಬ ಬಗ್ಗೆ ಪತ್ರಕರ್ತರೊಬ್ಬರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ- ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ನ್ನು ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗಡಿ ಭಾಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಶೇ 1 ಕ್ಕಿಂತ ಕಡಿಮೆಯಾಗುತ್ತಿದೆ. ಶೀಘ್ರವಾಗಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳ ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Related posts

ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ : ಸಿಎಂ

eNewsLand Team

ಪೆಟ್ರೋಲ್, ‌ಡೀಸೆಲ್ ಬೆಲೆ ಇಳಿಕೆ, ಇಂದು ಸಂಜೆ ಅಧಿಸೂಚನೆ: ಸಿಎಂ

eNEWS LAND Team

ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿಸಿದ ಬಸ್ ಚಾಲಕ

eNEWS LAND Team