37 C
Hubli
ಮೇ 4, 2024
eNews Land
ರಾಜ್ಯ

ಮೂವರು ಶಿಕ್ಷಕರು ಅಮಾನತು : ಚುನಾವಣಾ ಕರ್ತವ್ಯ ಲೋಪ

ಇಎನ್ಎಲ್ ಬ್ಯೂರೋ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಶಿಕ್ಷಕರು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಆದೇಶಿಸಿದ್ದಾರೆ.

ಸಿಂದಗಿ ವಿದ್ಯಾನಗರದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-4 ಶಾಲೆಯ ವಿ.ವಿ.ನಿಂಬರ್ಗಿ ಸ.ಶಿ., ಎಸ್.ಆರ್. ಸಿಂದಗಿ ಹಾಗೂ ಆರ್.ಎ.ಕಠಾರೆ. ಸ.ಶಿ. ಇವರನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಈ ಮೂವರು ಶಿಕ್ಷಕರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದೂ ನಿರ್ದೇಶನ ನೀಡಲಾಗಿದೆ. ಸದರಿ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದ್ದು, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಚಂಬೆಳಕಲ್ಲಿ ಒಂದಾದ ಚನ್ನವೀರ ಕಣವಿ

eNewsLand Team

ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಪ್ರತಿಭಟನೆ

eNEWS LAND Team

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ

eNEWS LAND Team