31 C
Hubli
ಮೇ 18, 2024
eNews Land
ರಾಜ್ಯ

ಸಿದ್ದು-ಡಿಕೆಶಿ ಜೋಡೆತ್ತಲ್ಲ ಕಾಡೇತ್ತು: ಕಟೀಲ್ ವ್ಯಂಗ್ಯ

ಇಎನ್ಎಲ್

 ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೇತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರುಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯವಾಡಿದರು.                       ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕಟೀಲ್ ಅವರು, ನಮ್ಮ ಪ್ರಧಾನಿ ಸಬ್ ಕಾ ಸಾತ್ ಸಬ್ ವಿಕಾಸ್ ಅಂದ್ರೆ, ಸಿದ್ದರಾಮಯ್ಯ ನವರದ್ದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಆಗಿದ್ದು, ಇದೀಗ ಅವರಿಗೆ ಸೋಲೋ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

             ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ ಪ್ರಶ್ನಿಸಿದ ಕಟೀಲ್ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ಅವರಿಗೆ ಪಕ್ಷವೇ ಮುನ್ನೆಡಿಸೋಕೆ ಆಗ್ತಲ್ಲ ದೇಶ ಮುನ್ನಡೆಸುತ್ತಾರಾ, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ರಾಹುಲ್ ವಿರುದ್ದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ. ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ ಎಂದರು.
ಇತ್ತ ಕೆಪಿಸಿಸಿ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೊಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋದ್ರಾ..?. ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ..?. ಡಿಕೆಶಿ ಮತ್ತು ಸಿದ್ದರಾಮಯ್ಯ ಜಗಳ ಮುಂದಿನ ಚುನಾವಣೆವರೆಗೂ ಮುಂದುವರೆಯತ್ತದೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು. ಅವರ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದರು.

 

Related posts

ಹೆಚ್ಚುವರಿ ಅಕ್ಕಿ ಕೊಳ್ಳಲು ನಿರಾಕರಿಸಿದ ಕೇಂದ್ರ ಸರ್ಕಾರ: ಸಿಎಂ ಸಿದ್ರಾಮಯ್ಯ

eNewsLand Team

27,093 ಮಂದಿ ಮೃಗಾಲಯಕ್ಕೆ ಭೇಟಿ ನೀಡಿದ್ದು, ₹ 26,67,880 ಆದಾಯ

eNEWS LAND Team

ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಮ್.ವಿ ಜನ್ಮ ದಿನಾಚರಣೆ: ಸಿಎಂ ಬೊಮ್ಮಾಯಿ

eNEWS LAND Team