33 C
Hubli
ಮೇ 16, 2024
eNews Land
ಆರ್ಥಿಕತೆ ಸುದ್ದಿ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಇಎನ್ಎಲ್ ಹಾವೇರಿ.ನ.26:

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ವೈಯಕ್ತಿಕ ಸಾಲ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿನ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55ಸಾವಿರದೊಳಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ, ಗುರುತಿನ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ ಇತ್ಯಾದಿ ದಾಖಲಾತಿಗಳನ್ನು ಹೊಂದಿರಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಬಯಸುವವರು ಆರ್ಥಿಕ ಚಟುವಟಿಕೆ ಅನುಸಾರ ಗರಿಷ್ಠ ರೂ.2ಲಕ್ಷಗಳ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು.

ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ(3,4,5 ನೇ ಕಂತುಗಳು) ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಅರ್ಜಿಯನ್ನು https://suvidha.karnataka.gov.in ನಲ್ಲಿ ಸಲ್ಲಿಸಬೇಕು.
ಆಸಕ್ತರು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹಾವೇರಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ 10-01-2022 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.inಗೆ ಸಂಪರ್ಕಿಸಬಹುದು.

Related posts

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

eNEWS LAND Team

ಸುರಕ್ಷಿತವಾಗಿರಿ ಎನ್ನತ್ತಲೇ 2ಲಕ್ಷ ದೋಚಿದ್ರು! ಹುಬ್ಬಳ್ಳಿಲಿ ಯಾರನ್ನ ನಂಬೇಕು? ಯಾರನ್ನ ಬಿಡಬೇಕು?

eNewsLand Team

ಉತ್ತಮವಾಗಿ ಕೆಲಸ ನಿರ್ವಹಿಸಿ ಇಲಾಖೆಗೆ ಗೌರವ ತನ್ನಿ: ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಟಿ.ಜಿ.ದೊಡ್ಡಮನಿ

eNewsLand Team