37 C
Hubli
ಮೇ 5, 2024
eNews Land
ಸುದ್ದಿ

ಹಣಬಲದಿಂದ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹುನ್ನಾರ: ಮುಖ್ಯಮಂತ್ರಿ ಬೊಮ್ಮಾಯಿ

ಇಎನ್ಎಲ್ ಅತ್ತಿಬೆಲೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ. ಜನಬಲ ಇಲ್ಲದಿರುವ ಕಾರಣ ಹಣದ ಮೂಲಕವೇ ಚುನಾವಣೆ ಗೆಲ್ಲಬೇಕೆಂದು ಹುನ್ನಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಅವರು ಇಂದು ಆನೇಕಲ್ ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶ ಉದ್ದೇಶಿಸಿ ಮಾತನಾಡಿದರು.

ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ, ಜೊತೆಗೆ ಪಕ್ಷಕ್ಕೂ ನೀಡಿ , ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತನೆ ಅತ್ಯಂತ ಕೀಳು ಮಟ್ಟದ್ದಾಗಿದ್ದು, ಕಾಂಗ್ರೆಸ್ ನ ನೈತಿಕತೆ ಕೆಳಮಟ್ಟಕ್ಕೆ ಇಳಿದಿರುವುದು ಬಹಳ ಸ್ಪಷ್ಟವಾಗಿದೆ. ಅನೈತಿಕವಾಗಿ ಹಣ ಖರ್ಚು ಮಾಡಿ ಗೆಲ್ಲಲು ಬಯಸಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಸರಿಯಾದ ಜಾಗವನ್ನು ತೋರಿಸಬೇಕು ಎಂದರು.

ಸಿದ್ದರಾಮಯ್ಯ ಅವರು ಬಿಜೆಪಿ ಯಾವಾಗಲೂ ಹಣಬಲ ಹಾಗೂ ತೋಳ್ಬಲದಿಂದ ಗೆಲ್ಲುತ್ತಾರೆಂದು ದೂರುತ್ತಾರೆ. ಆದರೆ ಈ ಕೆಲಸವನ್ನು ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ . ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಚುನಾವಣೆವರೆಗೂ ಹಣ ಚೆಲ್ಲುತ್ತಿರುವ ನಿಮಗೆ ಯಾವ ನೈತಿಕತೆ ಇದೆ ? ತಾವು ಅಧಿಕಾರದಲ್ಲಿದ್ದಾಗ ಗ್ರಾಮ ಪಂಚಾಯತಿಗಳ ಕಡೆ ತಿರುಗಿ ನೋಡಲಿಲ್ಲ. 2017 ರ ಚುನಾವಣೆಗೆ 3 ತಿಂಗಲ್ಲಿದ ಸಂದರ್ಭದಲ್ಲಿ ಲಕ್ಷ ಮನೆಗಳನ್ನು ನೀಡುವುದಾಗಿ ಹೇಳಿದಿರಿ, ಆದರೆ ಅದು ಘೋಷಣೆಯಾಗಿಯೇ ಉಳಿಯಿತು ಎಂದರು.

ಕಾಂಗ್ರೆಸ್ ಪಕ್ಷ ಗೆಲ್ಲುವುದಿಲ್ಲ ಎಂದು ಅವರಿಗೆ ಮುಂಚೆಯೇ ತಿಳಿದ್ದಿತ್ತು. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದು ಲಕ್ಷ ಮನೆಗಳನ್ನು ನಿರ್ಮಾಣಕ್ಕೆ ಹಣ ಒದಗಿಸಿತು. ನಮ್ಮ ಸರ್ಕಾರ 4 ಲಕ್ಷ ಗ್ರಾಮೀಣ ಪ್ರದೇಶದಲ್ಲಿ ಹಾಗೂ 1 ಲಕ್ಷ ನಗರ ಪ್ರದೇಶದಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಂಡಿದೆ. ಸದರಿ ಮನೆಗಳನ್ನು ಒಂದೂವರೆ ವರ್ಷದಲ್ಲಿ ಪೂರ್ಣಗೊಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಸಮಾವೇಶದಲ್ಲಿ ಕಂದಾಯ ಸಚಿವ ಆರ್ ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಕೇಂದ್ರ ಸಚಿವ ನಾರಾಯಣಸ್ವಾಮಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ ರೆಡ್ಡಿ, ಕೃಷ್ಣಪ್ಪ, ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ಉಪಸ್ಥಿತರಿದ್ದರು.

Related posts

ಶಾಸಕಿ ಕುಸುಮಾವತಿ ಶಿವಳ್ಳಿ ಸಂಬಂಧಿಗೆ‌‌ ಇದೆಂಥಾ ಸಾವು!

eNewsLand Team

 ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆ

eNEWS LAND Team

ಕೆ.ಐ.ಎ ನಲ್ಲಿ ನವೀನ್ ಪಾರ್ಥಿವ ಶರೀರ ಬರಮಾಡಿಕೊಂಡ: ಸಿಎಂ ಬೊಮ್ಮಾಯಿ

eNEWS LAND Team