24 C
Hubli
ಮೇ 6, 2024
eNews Land
ಕೃಷಿ ಸುದ್ದಿ

2021-22ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭ ; ರೈತರೇ ಸ್ವತ: ಬೆಳೆ ಸಮೀಕ್ಷೆ ಮಾಡಬಹುದು

ಇಎನ್ಎಲ್ ಧಾರವಾಡ

2021-22 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಡಿಸೆಂಬರ್ 8 ರಿಂದ ಆರಂಭಗೊಂಡಿದೆ. ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿ ಕೂಡ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ತಾವೇ ಸ್ವತಃ ಛಾಯಾಚಿತ್ರ ಸಮೇತ ಸಮೀಕ್ಷೆ ಮಾಡಬಹುದಾಗಿದೆ. ಹಿಂಗಾರು ಹಂಗಾಮಿನ ಬೆಳೆ ವಿವರ ದಾಖಲಿಸುವ ಮೂಲಕ ಸಮೀಕ್ಷೆ ಕೈಗೊಳ್ಳಲು “ಹಿಂಗಾರು ರೈತರ ಬೆಳೆ ಸಮೀಕ್ಷೆ 2021-22” ಎಂಬ ಹೆಸರಿನ ಮೊಬೈಲ್ ಆ್ಯಪ್‍ನ್ನು ಗೂಗಲ್ ಪ್ಲೇ ಸ್ಟೋರನಿಂದ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆ್ಯಪ್ ಬಳಸುವಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳ, ಕಂದಾಯ ಇಲಾಖೆಯ ಅಧಿಕಾರಿಗಳ ಅಥವಾ ಬೆಳೆ ಸಮೀಕ್ಷೆ ಕೈಗೊಂಡ ಖಾಸಗಿ ನಿವಾಸಿಗಳ ನೆರವು ಪಡೆಯಬಹುದಾಗಿದೆ.

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೇ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್‍ವಾರು ಬೆಳೆ ಪರಿಶೀಲನೆ, ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಅಥವಾ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಆಧಾರವಾಗಿಟ್ಟಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೇ ಬೆಳೆಗಳ ವಿವರವನ್ನು ಆ್ಯಪ್‍ನಲ್ಲಿ ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ರೇಷ್ಮೇ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹುಬ್ಬಳ್ಳಿ ರೈಲುಗಳು ಸೇವೆಯ ರದ್ಧತಿ

eNewsLand Team

ಮಲ್ಲೇಶ ಗುರುಸ್ವಾಮಿ ನೇತೃತ್ವದಲ್ಲಿ ಶಬರಿಮಲೆ ಯಾತ್ರೆ

eNEWS LAND Team

ರಾಜ್ಯಕ್ಕೆ ಶಾ; ಸಾರ್ವತ್ರಿಕ ಚುನಾವಣೆ ತಯಾರಿಗೆ‌ ಅಡಿಗಲ್ಲು? ಕೋರ್ ಕಮೀಟಿ ಸಭೆ ಸೆಂಟರ್ ಆಫ್ ಎಟ್ರಾಕ್ಷನ್!! 

eNewsLand Team