24.3 C
Hubli
ಮೇ 7, 2024
eNews Land
ಸುದ್ದಿ

ಲೋಕ ಅದಾಲತ್: 31,301 ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ: ನ್ಯಾ.ಮಲ್ಲಿಕಾರ್ಜುನ ಗೌಡ

ಇಎನ್ಎಲ್ ರಾಯಚೂರು:

ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ಒಟ್ಟು 31,301 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಹೇಳಿದರು.

ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 58,696 ಪ್ರಕರಣಗಳ ಪೈಕಿ 34,419 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 31,301 ಪ್ರಕರಣ ರಾಜಿ ಮೂಲಕ ಇತ್ಯರ್ಥಗೊಳಿಸಿ, 15,99,71,253 ರೂ.ಗಳ ಹಣವನ್ನು ಸಂಬoಧಿಸಿದವರಿಗೆ ಕೊಡಿಸಲಾಯಿತು.

ವ್ಯಾಜ್ಯ ಪೂರ್ವ ಪ್ರಕರಣಗಳ ಪೈಕಿ 342 ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 75 ಪ್ರಕರಣಗಳೊಂದಿಗೆ 81,63,522 ಹಣವನ್ನು ಇತ್ಯರ್ಥಗೊಳಿಸಲಾಯಿತು. ಅದಾಲತ್‌ನಲ್ಲಿ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್ ಮತ್ತು ನೀರಿನ ಶುಲ್ಕ ಪ್ರಕರಣ ಸೇರಿ ಇತರ ವ್ಯಾಜ್ಯ ಪೂರ್ವ ಪ್ರಕರಣಗಳು ಅದಾಲತ್‌ಗೆ ಆಯ್ಕೆಯಾಗಿದ್ದವು.

ಮೋಟರ್ ವಾಹನ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣ, ಕಂದಾಯ ಪ್ರಕರಣ, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಸೇರಿ ಹಲವು ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಹಲವು ಪ್ರಕರಣ ಇತ್ಯರ್ಥಗೊಂಡವು.

ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರ ಸಂಪರ್ಕದೊoದಿಗೆ ರಾಜಿ ಸಂಧಾನದ ಮೂಲಕ ವಿವಿಧ ಪ್ರಕರಣ ಇತ್ಯರ್ಥಪಡಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಜನ ಆರ್.ಎ ಸೇರಿದಂತೆ ಇತರರು ಇದ್ದರು.

Related posts

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

eNEWS LAND Team

ಜಿಲ್ಲೆಯ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

eNEWS LAND Team

RUNNING OF SUMMER SPECIAL TRAIN BETWEEN SECUNDERABAD AND ARSIKERE

eNewsLand Team