27.1 C
Hubli
ಮೇ 5, 2024
eNews Land
ಜಿಲ್ಲೆ

ಹಾವೇರಿ: ಎಪಿಎಂಸಿಲಿ ಇ-ಟೆಂಡರ್ ಮೂಲಕ ಮೆಕ್ಕೆಜೋಳ ವ್ಯಾಪಾರ

ಇಎನ್ಎಲ್ ಹಾವೇರಿ: ಮೆಕ್ಕೆಜೋಳಕ್ಕೆ ಸ್ಪರ್ಧಾತ್ಮಕ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಫೆಬ್ರುವರಿ 10 ರಿಂದ ಪ್ರತಿ ಸೋಮವಾರ ಹಾಗೂ ಗುರುವಾರ ಇ-ಟೆಂಡರ್ ಮೂಲಕ ಮೆಕ್ಕೆಜೋಳ ವ್ಯಾಪಾರ ವಹಿವಾಟು ಆರಂಭಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿ ತಿಳಿಸಿದೆ.

ರೈತರು ಸ್ಥಳೀಯವಾಗಿ ಮಾರಾಟಮಾಡುತ್ತಿರುವುದರಿಂದ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ರೂ.1870ಕ್ಕಿಂತ ಕಡಿಮೆ ದರ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳಕ್ಕೆ ಸ್ಪರ್ಧಾತ್ಮಕ ಬೆಲೆ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾನ್ಯ ಕೃಷಿ ನಿರ್ದೇಶಕರ ಸೂಚನೆ ಮೇರೆಗೆ ಮೆಕ್ಕೆಜೋಳಕ್ಕೆ ಇ-ಟೆಂಡರ್‍ನಲ್ಲಿ ಮಾರಾಟ ವ್ಯವಸ್ಥೆ ಕಲ್ಪಿಸಿದೆ. ಈಗಾಗಲೇ ಶೇಂಗಾ ಮತ್ತು ಹತ್ತಿಗೆ ಇ-ಟೆಂಡರ್ ಮಾರಾಟ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಮೆಕ್ಕೆಜೋಳಕ್ಕೂ ಸ್ಪರ್ಧಾತ್ಮಕ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಹಾವೇರಿಯ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾದ ಮಲ್ಲಿಕಾರ್ಜುನ ಹಾಗೂ ಕಾರ್ಯದರ್ಶಿ ಪರಮೇಶ್ವರ ನಾಯಕ್ ಕೋರಿದ್ದಾರೆ.

Related posts

ಹುಬ್ಬಳ್ಳಿಯ ಐತಿಹಾಸಿಕ ಚಂದ್ರಮೌಳೇಶ್ವರ‌ ದೇವಸ್ಥಾನ ಇನ್ನಾದ್ರೂ ಅಭಿವೃದ್ಧಿ ಆಗತ್ತಾ?

eNewsLand Team

ಶೆಟ್ಟರ್ ಸೋಲಿಸಲು ಬಿಜೆಪಿ ಚಕ್ರವ್ಯೂಹ: ಕಾಂಗ್ರೆಸ್ ಶಾಲು ಹಾಕ್ಕೊಂಡವರ ರಾಜಕೀಯ ಜೀವನ ‘THE END’?

eNEWS LAND Team

ಮತದಾನ ಜಾಗೃತಿಗಾಗಿ ಧಾರವಾಡದಿಂದ ಹುಬ್ಬಳ್ಳಿವರೆಗೆ ಸೈಕಲ್ ಜಾಥಾ ಮಾಡಿದ ಚುನಾವಣಾ ವೀಕ್ಷಕರು

eNEWS LAND Team