28.2 C
Hubli
ಮೇ 3, 2024
eNews Land
ಸಂಸ್ಕೃತಿ ಸುದ್ದಿ

ಬಂಜಾರ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು: ಸಿಎಂ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ಬಂಜಾರ ಸಮುದಾಯ ಒಗ್ಗಟ್ಟಿನಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಅವರು ಇಂದು ತಮ್ಮ ನಿವಾಸದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದರು.

ಸಂತ ಸೇವಾಲಾಲರ ಜಯಂತಿ ಅರ್ಥಪೂರ್ಣ ವಾಗಿ ಆಚರಿಸಬೇಕೆಂಬ ಆಶಯ ನಮ್ಮದು. ಲಂಬಾಣಿ, ಬಂಜಾರ ಸಮುದಾಯಕ್ಕೆ ದೊಡ್ಡ ಪರಂಪರೆ ಇದೆ. ತನ್ನದೇ ವೈಶಿಷ್ಟ್ಯವನ್ನು ಹಿಂದಿರುವ ಸಮಾಜ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಒಂದು. ಸಮುದಾಯದ ಯುವಕರು ವಿದ್ಯಾವಂತರು ಹಾಗೂ ಬುದ್ಧಿವಂತರು ಆಗಲು ಹಾಗೂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ತಾಂಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ತಾಂಡದವರಿಗೆ ಆರ್ಥಿಕ ನೆರವು ನೀಡಲು ವಿವಿಧ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.

ಶ್ರಮಜೀವಿಗಳು : ಬಂಜಾರ ಸಮುದಾಯದವರು ಬಹಳ ಶ್ರಮಜೀವಿಗಳು ಕರ್ನಾಟಕದ ಪ್ರಗತಿ ಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಅಗತ್ಯ ನೆರವನ್ನು ನೀಡಲು ಕ್ರಮ ಜರುಗಿಸಲಾಗುವುದು ಎಂದರು.

Related posts

ಕೋಟಿಗೊಬ್ಬ-3 ಹಾಟ್ ಬ್ಯೂಟಿ ಶ್ರದ್ಧಾ ದಾಸ್ ಈ ಫೋಟೋ ನೋಡಿದ್ರೆ ಹುಡುಗರು ಹಿಟ್ ವಿಕೇಟ್!

eNewsLand Team

ಕಾಂಗ್ರೆಸ್’ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ

eNEWS LAND Team

ಮತದಾನ ಜಾಗೃತಿಗಾಗಿ ಧಾರವಾಡದಿಂದ ಹುಬ್ಬಳ್ಳಿವರೆಗೆ ಸೈಕಲ್ ಜಾಥಾ ಮಾಡಿದ ಚುನಾವಣಾ ವೀಕ್ಷಕರು

eNEWS LAND Team