34 C
Hubli
ಮೇ 3, 2024
eNews Land
ಸುದ್ದಿ

6000 ಸಿ.ಎಸ್.ಸಿ ಕೇಂದ್ರಗಳ ಸ್ಥಾಪನೆ: ಎಲ್.ಎಚ್.ಮಂಜುನಾಥ

ಇಎನ್ಎಲ್ ಹುಬ್ಬಳ್ಳಿ : ರಾಜ್ಯಾದ್ಯಂತ ಧರ್ಮಸ್ಥಳ ಸಂಸ್ಥೆ ವತಿಯಿಂದ 6000 ಸಿ.ಎಸ್.ಸಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಯ್ದ ಸೇವೆಗಳನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ ಹೇಳಿದರು.

ಹುಬ್ಬಳ್ಳಿಯ ರಾಯಾಪುರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ 203ನೇ ಸಿಎಸ್ ಸಿ ಕೇಂದ್ರವನ್ನು ಉದ್ಘಾಟಿಸಿ ಹಾಗೂ ಸಾಂಕೇತಿಕವಾಗಿ 5 ಜನ ಫಲಾನುಭವಿಗಳಿಗೆ ಇ – ಶ್ರಮ್ ಕಾರ್ಡ್ ವಿತರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 203 ಸಿಎಸ್ ಸಿ ಕೇಂದ್ರಗಳ ಮೂಲಕ 61530 ಇ- ಶ್ರಮ್ ಕಾರ್ಡ್ ಗಳನ್ನು ಮಾಡಲಾಗಿದೆ. ಸಾರ್ವಜನಿಕರು ಈ ಕೇಂದ್ರಗಳ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ, ಧಾರವಾಡ ಜಿಲ್ಲೆಯ ನಿರ್ದೇಶಕ ಸುರೇಶ್.ಎಂ ಸೇರಿದಂತೆ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೇ 28 ಹುಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ

eNewsLand Team

ನಾಲ್ಕು ವರ್ಷ ಅಧಿಕಾರ ಮಾಡಿದ್ರೂ ಗುಂಡಿ ಮುಚ್ಚದ ಬಿಜೆಪಿ: ಸಿಎಂ ಸಿದ್ದು

eNewsLand Team

ಅಣ್ಣಿಗೇರಿ: ಕಸಾಪದಿಂದ ದತ್ತಿ ಉಪನ್ಯಾಸ ಹಾಗೂ ಕವಿಗೋಷ್ಠಿ

eNEWS LAND Team