37 C
Hubli
ಮೇ 3, 2024
eNews Land
ಅಪರಾಧ

ಹಿಜಾಬ್ ಪ್ರಕರಣ ಆದೇಶ ಸಂಭವ:ಜಿಲ್ಲೆಯಲ್ಲಿ ಮಾ.15 ರಿಂದ 19 ರವರೆಗೆ ಪ್ರತಿಬಂಧಕಾಜ್ಞೆ

ಇಎನ್ಎಲ್ ಧಾರವಾಡ

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛ ನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ವೇಳೆ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ ) ಮತೀಯ ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು ದಿನಾಂಕ 15-03-2022 ರಂದು ಬೆಳಗ್ಗೆ 6ಗಂಟೆಯಿಂದ 19-03-2022 ರಂದು ಬೆಳಗ್ಗೆ 06:00 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ . ಶಸ್ತ್ರ , ಬಡಿಗೆ , ಭರ್ಚಿ , ಖಡ್ಗ , ಗದೆ , ಬಂದೂಕು , ಚೂರಿ , ಲಾಠಿ , ಡೊಗ್ಗ , ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ . ಕಲ್ಲುಗಳನ್ನು , ಕ್ಷಾರಪದಾರ್ಥ , ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿ , ಕಲ್ಲುಗಳನ್ನು ಮತ್ತು ಇತರ ಎಸೆಯುವಂತಹ ವಸ್ತುಗಳನ್ನು ಎಸೆಯುವ ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ .
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿ ಬಂಧಿಸಲಾಗಿದೆ . ಬಹಿರಂಗವಾಗಿ ಘೋಷಣೆ ಮಾಡುವುದು , ಪದ ಹಾಡುವುದು , ವಾದ್ಯ ಬಾರಿಸುವುದು , ವ್ಯಾಖ್ಯಾನ ಕೊಡುವುದು , ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ . ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು , ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು , ಚಿಹ್ನೆಗಳು , ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ . ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು , ಸ್ಫೋಟಕ ವಸ್ತುಗಳು , ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ . ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು . ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.ಶವ ಸಂಸ್ಕಾರಕ್ಕೆ ಅಥವಾ ಮದುವೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ . ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Related posts

ಹುಬ್ಬಳ್ಳಿಲಿ ಧಗಧಗನೆ ಉರಿದ ಕಾರು! ಪ್ರಯಾಣಿಕರ ಕತೆ?

eNewsLand Team

ಇಎನ್ಎಲ್ ಎಕ್ಸಕ್ಲೂಸಿವ್: ವಾಸ್ತು ಪುರುಷ ಮಟಾಶ್ ಹಿಂದಿನ ಮಸಲತ್ತಿನ ಇಂಚಿಂಚು ಇನ್ಫಾರ್ಮೇಶನ್!! ಸ್ಕೆಚ್, ಮಟಾಶ್

eNEWS LAND Team

ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಅವಘಡ!

eNEWS LAND Team