27.4 C
Hubli
ಮೇ 5, 2024
eNews Land
ಸುದ್ದಿ

ಪಿಎಂ-ಕಿಸಾನ್ ಕರ್ನಾಟಕ:47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರು. ಬಿಡುಗಡೆ

ಇಎನ್ಎಲ್ ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2ಸಾವಿರ ರು. ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.

ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರು. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್‍ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರು. ಬಿಡುಗಡೆ ಮಾಡಿದರು.

ಲೌಡ್’ಸ್ಪೀಕರ್ ಆದೇಶ ಪಾಲಿಸದಿದ್ದರೆ ಗುಂಡು ಹೊಡೆಯುತ್ತೇನೆ : ಪ್ರಮೋದ್ ಮುತಾಲಿಕ್

ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಹೊಸ ನಾಯಕತ್ವದಲ್ಲಿ ಕಮಾಲ್ ಮಾಡುತ್ತಾ ಆರ್’ಸಿಬಿ??

eNewsLand Team

ಚಡ್ಡಿ ಖರೀದಿಗೆ ಹೋಗಿ ಲಕ್ಷ ಕಳೆದುಕೊಂಡ! ಆನ್ಲೈನ್ ಮುಂಡಾಮೋಚ್ತು!!

eNewsLand Team

ಅಣ್ಣಿಗೇರಿ ಪುರಸಭೆ ಚುನಾವಣೆ ಅಂಗಳದಲ್ಲಿ ಉದ್ದ ಜಿಗಿತ, ಎತ್ತರ ಜಿಗಿತ!!

eNEWS LAND Team