23 C
Hubli
ಜುಲೈ 4, 2022
eNews Land
ಸಿನೆಮಾ

ಚಂದನವನದ ಹಿರಿಯಜ್ಜ ಶಿವರಾಂ ಇನ್ನಿಲ್ಲ

Listen to this article

ಇಎನ್ಎಲ್ ಫಿಲ್ಮಿ ಡೆಸ್ಕ್

ಚಂದನವನದ ಹಿರಿಯಜ್ಜ ಎಸ್.ಶಿವರಾಂ (84) ಶುಕ್ರವಾರ ಮಧ್ಯಾಹ್ನ ನಿಧನರಾದರು. ಕಳೆದ ತಿಂಗಳ ಪುನೀತ್ ರಾಜ್‍ಕುಮಾರ್ ಕಳೆದುಕೊಂಡ ಕನ್ನಡ ಚಿತ್ರರಂಗಕ್ಕೆ ವಿಧಿ ಗಾಯದ ಮೇಲೆ ಬರೆ ಎಳೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂ ಕುಸಿದುಬಿದ್ದಿದ್ದರು. ಮಿದುಳು ಸಂಕುಚಿತಗೊಂಡಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಶಸ್ತ್ರಚಿಕಿತ್ಸೆ ಅಸಾಧ್ಯ ಎಂದು ವೈದ್ಯರು ಹೇಳಿದ್ದರು.

1938 ಜನವರಿ 28 ರಂದು ಬೆಂಗಳೂರಿನ ಚೂಡಸಂದ್ರದಲ್ಲಿ ಜನಿಸಿದ್ದ ಶಿವರಾಂಮ, ಕನ್ನಡ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 ದಶಕಗಳ ಕಾಲ ಜನಮನ ರಂಜಿಸಿದ್ದರು. ಅವರು ಕಿರುತೆರೆಯ ಕಾರ್ಯಕ್ರಮಗಳಲ್ಲೂ ನಟಿಸಿದ್ದರು.

Related posts

ಕಾರವಾರದ ಪ್ರಾಧ್ಯಾಪಕರೊಬ್ಬರು ಪುನೀತ್ ಮಣ್ಣಿನ ಮೂರ್ತಿ ಮಾಡಿದ್ದಾರೆ

eNewsLand Team

ಮಿಲ್ಕಿ ಬ್ಯೂಟಿಯ ಫೋಟೋಶೂಟ್

eNewsLand Team

ಪುನೀತ್ ರಾಜಕುಮಾರ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

eNewsLand Team