ಇಎನ್ಎಲ್ ಧಾರವಾಡ
ಕಳೆದ 16 ವರ್ಷಗಳ ಹಿಂದೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೌಲಾಲಿ ಗಫಾರಸಾಬ ಅತ್ತಾರ ಬಂಧಿತ. ಈತನ ಪ್ರಕರಣ ಕೆದಕಿದ ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ ಜಿ ಚವ್ಹಾಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿ ಇದ್ದಾನೆ. ಈ ಕಾರ್ಯವೈಖರಿಗೆ ಹುಧಾ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.