eNews Land
ಅಪರಾಧ

ಹುಬ್ಬಳ್ಳಿ: ಭೀಕರ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

Listen to this article

ಇಎನ್ಎಲ್ ಧಾರವಾಡ:  ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ತಾರಿಹಾಳ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಬ್ಬರು ಮೃತಪಟ್ಟಿದ್ದಾರೆ.

ಹಳೆ ಹುಬ್ಬಳ್ಳಿಯ ಜಗದೀಶ್ ಶೆಟ್ಟಿ (40) ಮೃತಪಟ್ಟವರು. ಮುಂಬೈನಿಂದ ಬೆಂಗಳೂರು ಕಡೆಗೆ ಹೊರಟಿದ್ದ ಬಸ್ ಹಾಗೂ ಹುಬ್ಬಳ್ಳಿಯಿಂದ ಉಳವಿಗೆ ಹೊರಟ್ಟಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ.

ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Related posts

ಹುಬ್ಬಳ್ಳಿಯಲ್ಲಿ ಅಕ್ರಮ ಮದ್ಯದ ಅಮಲು!

eNewsLand Team

ಶಿಗ್ಗಾಂವಿಯಲ್ಲಿ ಶೂಟ್; ಕತ್ತಲಲ್ಲಿ ಮನೆಯೊಳಗೆ ಓಡಿ ಬಚಾವಾದ ಸಲ್ಮಾ!!

eNewsLand Team

ಹುಬ್ಬಳ್ಳಿಲಿ ಧಗಧಗನೆ ಉರಿದ ಕಾರು! ಪ್ರಯಾಣಿಕರ ಕತೆ?

eNewsLand Team