ಇಎನ್ಎಲ್ ಕಲಘಟಗಿ: ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಸಮೀಪ ಮೊದಲೇ ಅಪಘಾತವಾಗಿ ದುರಸ್ತಿ ಮಾಡಲು
ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಯುವಕನೊರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕಲಘಟಗಿ ಪಟ್ಟಣದ ಮಹ್ಮದಸಾದಿಕ್ ಬೆಂಗೇರಿ(28) ಎಂದು ಗುರುತಿಸಲಾಗಿದೆ.
ಇವನು ಹುಬ್ಬಳ್ಳಿ ಕಡೆಯಿಂದ ಕಲಘಟಗಿ ಕಡೆಗೆ ಬರುವಾಗ ಮೊದಲೇ ಅಪಘಾತವಾಗಿ ದುರಸ್ತಿ ಮಾಡಲು ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಹಿಂಬದಿಯಲ್ಲಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಪ್ರಭು ಸೂರಿನ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.