ಇಎನ್ಎಲ್ ಹುಬ್ಬಳ್ಳಿ
ಇಲ್ಲಿನ ಸ್ಟೇಶನ್ ರಸ್ತೆಯ ಹರ್ಷ ಕಾಂಪ್ಲೆಕ್ಸ್ ನಲ್ಲಿರುವ ಇಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.
ಹರ್ಷ ಕಾಂಪ್ಲೆಕ್ಸ ನ ಎರಡನೇ ಮಹಡಿಯಲ್ಲಿರುವ ಹರ್ಷ ಎಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸೆಂಟರ್ ನಲ್ಲಿನ ವಸ್ತುಗಳಿಗೆ ವ್ಯಾಪಿಸಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಇದೇ ಕಾಂಪ್ಲೆಕ್ಸ್ ನಲ್ಲಿ ನೂರಾರು ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಗೋದಾಮಿಗೆ ಬೆಂಕಿ ಅವಘಡ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ಘಟನೆಗ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಹೆಚ್ಚಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.