ಇಎನ್ಎಲ್ ಸುದ್ದಿ ಸೇವೆ :
ಹುಬ್ಬಳ್ಳಿ : ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದ ಸೋಮಲಿಂಗ ಅವರಾದಿ ಎಂಬಾತನ ಬಂಧನಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಬೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಹಿಂದೂ ಪಠಣ ಮಾಡಿದ್ದಕ್ಕೆ ಆಕ್ಷೇಪ, ಏಸುವನ್ನು ಪ್ರಾರ್ಥನೆ ಮಾಡಲು ಒತ್ತಾಯಿಸಿದ್ದಕ್ಕೆ ಆಕ್ರೋಶ ಸೋಮಲಿಂಗ ಎಂಬಾತ ಕ್ರಿಶ್ಚಿಯನ್ ಪಾಸ್ಟರ್ ಆಗಿ ನೇಮಕಗೊಂಡಿದ್ದಾನೆ. ಆತ ಹಿಂದೂಧರ್ಮವನ್ನು ನಂಬದಂತೆ ಒತ್ತಾಯ ಮಾಡುತ್ತಾನೆ ಎಂದು ದೂರು.ಪೊಲೀಸ್ ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಠಾಣೆಯ ಎದುರು ಧರಣಿ ಕುಳಿತ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ಶಾಸಕ ಅರವಿಂದ ಬೆಲ್ಲದ ಭೇಟಿ, ಡಿಸಿಪಿ ಜೊತೆಗೆ ಚರ್ಚೆ ನಡಿಸಿ, ಮತಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ.
ಶಾಸಕ ಅರವಿಂದ ಬೆಲ್ಲದ್ ಹೇಳಿಕೆ :
ಮತಾಂತರ ತಡೆ ಕಠಿಣ ಕಾನೂನು ಜಾರಿಗಾಗಿ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಕಾಯಿದೆ ರೂಪುರೇಷೆ ಸಂಬಂಧಿಸಿದಂತೆ ಹಿರಿಯ ವಕೀಲರನ್ನು ಸಂಪರ್ಕಿಸಿದ್ದೇವೆ. ಅದರ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಿದ್ದೇವೆ. ಧಾರವಾಡ ಜಿಲ್ಲೆಯಲ್ಲೂ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ.ಮತಾಂತರ ಪ್ರಕ್ರಿಯೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ನಮ್ಮ ಕಾರ್ಯಕರ್ತರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ನೀಡಿದ್ದಾರೆ. ಸೂಕ್ತ ಕ್ರಮಗಳನ್ನು ಜರುಗಿಸದಿದ್ದರೆ ಪೊಲೀಸರ ವಿಳಂಬ ಧೋರಣೆ ಖಂಡಿಸಿ ಹೋರಾಟ ಮಾಡಲಾಗುವುದು