ಹಬ್ಬದ ದಿನವೇ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಅವಘಡ
ಇಎನ್ಎಲ್ ಹುಬ್ಬಳ್ಳಿ
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಫರ್ನಿಚರ್ ಗ್ರೇಸ್ ಎನ್ನುವ ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿದೆ.
ಪ್ರಕಾಶ ಇರಕಲ್ ಎನ್ನುವವರಿಗೆ ಸೇರಿದ ಫರ್ನಿಚರ್ ಕಾರ್ಖಾನೆ
ಬೆಳಗ್ಗೆ 7.45 ರ ಹೊತ್ತಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿದೆ ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ.
ಬೆಂಕಿ ಅವಘಡದಲ್ಲಿ ಅಂದಾಜು 42 ಲಕ್ಷ ಮೌಲ್ಯದ ಕಟ್ಟಿಗೆ ಸಂಪೂರ್ಣ ಭಸ್ಮವಾಗಿದೆ ಎನ್ನಲಾಗಿದೆ.
ಹುಬ್ಬಳ್ಳಿ ಸೇರಿದಂತೆ 3 ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿ ನಿರ್ವಹಿಸಲಾಯಿತು.