24.3 C
Hubli
ಮೇ 26, 2024
eNews Land
ಜಿಲ್ಲೆ

ಮತ ಏಣಿಕೆ ದಿನದಂದು ಶಾಂತಿ, ಸುವ್ಯವಸ್ಥೆ ಕಾಪಾಡಲು ಮೇ.13 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಘೋಷಿಸಿ, ಆದೇಶಿಸಿದ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಇದನ್ನು ಓದಿ:ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪೂರ್ವ ಕ್ಷೇತ್ರದ ಪ್ರಣಾಳಿಕೆಯ ಬಿಡುಗಡೆ: ಡಾ.ಕ್ರಾಂತಿಕಿರಣ

ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಭಂದಿಸಿದಂತೆ, ಜಿಲ್ಲೆಯ ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ಕಾರ್ಯವು ಮೇ.13 ರಂದು ಜರುಗಲಿದೆ. ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ಹಾಗೂ ನಂತರದಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಮೇ.13 ರ ಬೆಳಿಗ್ಗೆ 6 ಗಂಟೆಯಿಂದ ಮೇ.14 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. 1973 ರ ಕಲಂ 144 ರ ಮೇರೆಗೆ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ:ಮತದಾನ ಸಿದ್ಧತೆ ಪೂರ್ಣ ; ಒಟ್ಟು 15,23,080 ಮತದಾರರು; 1,642 ಮತಗಟ್ಟೆಗಳು, ಮತಗಟ್ಟೆಗಳಿಗೆ 8,319 ಸಿಬ್ಬಂದಿಗಳ ನಿಯೋಜನೆ; ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ
ಪ್ರತಿಬಂಧಕಾಜ್ಞೆ ಜಾರಿ ಸಮಯದಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ.

ಇದನ್ನು ಓದಿ:ಭಜರಂಗದಳ ಮತ್ತು ಪಿಎಫ್ಆಯ್ ಒಂದೇ ತಕ್ಕಡಿಯಲ್ಲಿ ತೂಗಿದ ಕಾಂಗ್ರೆಸ್ ಮುಖಂಡ ಯಾರು?
ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಇದನ್ನು ಓದಿ:Reels (ವಿಡಿಯೋ) ಮಾಡಲು ಸ್ಪರ್ಧೆ!! ಇಲ್ಲಿದೆ ನೋಡಿ
ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಮತ ಏಣಿಕೆ ಸ್ಥಳ, ಇತರೆ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ

ಇದನ್ನು ಓದಿ:ಬಿಜೆಪಿ ಯೋಜನೆಗಳೇ ಕಾಂಗ್ರೆಸ್’ನ ಪ್ರಣಾಳಿಕೆ; ಇದೊಂದು ದಗಾಬಾಜಿ ಪ್ರಣಾಳಿಕೆ: ಬೊಮ್ಮಾಯಿ ವ್ಯಂಗ್ಯ
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತ ಏಣಿಕೆ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಇದನ್ನು ಓದಿ:ಮನೆಯಿಂದಲೇ ಮತದಾನ ಮಾಡಿದ 80 ವರ್ಷ ಮೆಲ್ಪಟ್ಟ ಹಿರಿಯ ಹಾಗೂ ವಿಶೇಷಚೇತನ ಮತದಾರರು ಎಷ್ಟು? ಇಲ್ಲಿದೆ ನೋಡಿ!
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.

ಇದನ್ನು ಓದಿ:ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಪೂರಕ: ಜೆ.ಪಿ.ನಡ್ಡಾ
ಯಾವುದೇ ವ್ಯಕ್ತಿ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:ಡಾ.ಪಿ.ವಿ.ದತ್ತಿ ರೋಟರಿ ಶಾಲೆಯಲ್ಲಿ ಕಿವುಡು ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಾರಂಭ
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.

ಇದನ್ನು ಓದಿ:ಹು-ಧಾ ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆದ ಶೆಟ್ಟರ್
ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 88 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ:ಹಿರಿಯರ ಸಮಸ್ಯೆ ಪರಿಹಾರಕ್ಕೆ “ಅನ್ವಯಾ” ಚಾಯ್ ಪೇ ಚರ್ಚಾ

Related posts

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿ ನವೆಂಬರ್ 6 ರವರೆಗೆ ಅವಕಾಶ

eNEWS LAND Team

ಮನೆಯಿಂದಲೇ ಮತದಾನ ಮಾಡಿದ 80 ವರ್ಷ ಮೆಲ್ಪಟ್ಟ ಹಿರಿಯ ಹಾಗೂ ವಿಶೇಷಚೇತನ ಮತದಾರರು ಎಷ್ಟು? ಇಲ್ಲಿದೆ ನೋಡಿ!

eNEWS LAND Team

ಚುನಾವಣಾ ಅಕ್ರಮ ತಡೆಯಲು ಸಾರ್ವಜನಿಕರು ‘ಸಿ-ವಿಜಿಲ್’ ಆ್ಯಪ್ ನ್ನು  ಸದ್ಬಳಕೆ ಮಾಡಿಕೊಳ್ಳಲಿ: ಡಿಸಿ ಗುರುದತ್ತ ಹೆಗಡೆ

eNEWS LAND Team