34 C
Hubli
ಮಾರ್ಚ್ 28, 2024
eNews Land
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 1642 ಮತಗಟ್ಟೆಗಳು: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ

ಇದನ್ನು ಓದಿ:ಅಪಘಾತ ರಹಿತ ಬಸ್ ಚಾಲಕರು: “HEROS ON THE ROAD” ಚಾಲಕರೇ ತಪ್ಪದೇ ನೋಡಿ!

ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ನೇದ್ದಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ತೆರೆದಿರುವ ಹೆಚ್ಚುವರಿ 6 ಮತಗಟ್ಟೆಗಳು ಸೇರಿದಂತೆ ಜಿಲ್ಕೆಯ ಎಲ್ಲ ಒಟ್ಟು 1642 (1636+6) ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ವಿವರವನ್ನು ಸಾರ್ವಜನಿಕರ, ಮತದಾರರ ಮಾಹಿತಿಗಾಗಿ ಇಂದು ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಇದನ್ನು ಓದಿ:ಹುಬ್ಬಳ್ಳಿಯ ಭೂಮಾಪಕ ರಮೇಶ ನೀಲಪ್ಪ ಡವಳಗಿ ಜೈಲಿಗೆ: ಯಾಕೆ ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ಆಯೋಗದ ನಿಯಮಾನುಸಾರ ನಿಗದಿತ ಸಂಖ್ಯೆಗಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ  ಮತಗಟ್ಟೆ ಸ್ಥಾಪಿಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಕೇಳಿ ಪ್ರಸ್ತಾವಣೆ ಸಲ್ಲಿಸಲಾಗಿತ್ತು. ಅದರಂತೆ ಆಯೋಗ ಅನುಮತಿ ನೀಡಿದ್ದು, ಧಾರವಾಡ-71 ವಿಧಾನ ಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 3, ಹುಬ್ಬಳ್ಳಿ ಧಾರವಾಡ ಪೂರ್ವ-72 ವಿಧನಾಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 1 ಮತ್ತು ಹುಬ್ಬಳ್ಳಿ ಧಾರವಾಡ ಸೆಂಟ್ರಲ್-73 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 2 ಸೇರಿ ಒಟ್ಟು 6 ಹೆಚ್ವುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ:ಮನೆಯಿಂದಲೇ ಮತದಾನ ಮಾಡಲು ಒಪ್ಪಿಗೆ ನೀಡಿದ ವಿಕಲಚೇತನರ ಹಾಗೂ 80 + ವಯಸ್ಸಾದವರ ಮನೆಗೆ ಏ.29,30 ಹಾಗೂ ಮೇ 1 ರಂದು ಚುನಾವಾಣಾ ಸಿಬ್ಬಂದಿ ಭೇಟಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಹೆಚ್ಚುವರಿ 6 ಮತಗಟ್ಟೆಗಳ ಸೇರಿ ಜಿಲ್ಕೆಯ ಏಳು ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯ 1642 ಮತಗಟ್ಟೆಗಳ ವಿವರ ಇರುವ ಯಾದಿಯನ್ನು ಆಯಾ ವಿಧಾನಸಭಾ ಮತಕ್ಷೇತ್ರವಾರು ಪ್ರಕಟಿಸಲಾಗಿದ್ದು ಜಿಲ್ಲಾಧಿಕಾರಿಗಳ ಕಛೇರಿ, ಉಪವಿಭಾಗಾಧಿಕಾರಿಗಳ ಕಛೇರಿ, ತಹಶೀಲ್ದಾರ ಕಛೇರಿ, ತಾಲೂಕಾ ಪಂಚಾಯತಿ, ಗ್ರಾಮ ಪಂಚಾಯತಿ, ಪುರಸಭೆ, ಪಟ್ಟಣ ಪಂಚಾಯತ,ಮಹಾನಗರ ಪಾಲಿಕೆಯ ಕಛೇರಿಯಲ್ಲಿ ಸಾರ್ವಜನಿಕರ ಪರಿಶೀಲನೆಗೆ ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:ಮತದಾನ ಪ್ರಮಾಣ ಹೆಚ್ಚಿಸಲು ಶ್ರಮಿಸಿ: ಪಿ.ಎಸ್. ವಸ್ತ್ರದ

Related posts

ಕಲಘಟಗಿ:ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳ ಭೇಟಿ

eNewsLand Team

ಮಿನಿ ಉದ್ಯೋಗ ಮೇಳ: ನವನಗರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ

eNEWS LAND Team

ಅಣ್ಣಿಗೇರಿ; ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು

eNewsLand Team