28 C
Hubli
ಫೆಬ್ರವರಿ 3, 2023
eNews Land
ಜಿಲ್ಲೆ

ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಪ್ರಶಸ್ತಿ ಮತ್ತು ಯುವ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Listen to this article

ಇಎನ್ಎಲ್ ಧಾರವಾಡ: 

ನಗರದ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಇಂದು ಸಂಜೆ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಡಾ. ಮಲ್ಲಿಕಾರ್ಜುನ ಮನಸೂರ ಅವರ ಜನ್ಮದಿನಚರಣೆ ಹಾಗೂ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಂಗೀತೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಅವರು ಪಂಡಿತ ಉಲ್ಲಾಸ್ ಕಶಾಳ್ಕರ್ ಇವರಿಗೆ ರಾಷ್ಟ್ರೀಯ ಪ್ರಶಸ್ತಿ ಮತ್ತು ಶ್ರೀಧರ ಮಾಂಡ್ರೆ ಇವರಿಗೆ ರಾಷ್ಟ್ರೀಯ ಯುವ ಪ್ರಶಸ್ತಿ ನೀಡಿ ಗೌರವಿಸಿದರು.
ಗಂಗೂಬಾಯಿ ಹಾನಗಲ್ ಗುರುಕುಲ ಮಕ್ಕಳಿಂದ ಸಂಗಿತ ಕಚೇರಿ ನಡೆಯಿತು.ಕಾರ್ಯಕ್ರಮದಲ್ಲಿ ಪಂಡಿತ ವೆಂಕಟೇಶ ಕುಮಾರ, ಮುರಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಡಾ.ಮಲ್ಲಿಕಾರ್ಜುನ ಮನಸೂರ ಅವರ ಮಗಳಾದ ನೀಲಾ ಎಂ ಕೊಡ್ಲಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಹಾಗೂ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ಹಿಜಾಬ್ ನಿರ್ಬಂಧ ಖಂಡಿಸಿ ಹುಬ್ಬಳ್ಳಿಯಲ್ಲಿ ಅಂಜುಮನ್ ಸಂಸ್ಥೆ ಬೃಹತ್ ಪ್ರತಿಭಟನೆ

eNewsLand Team

ಪದ್ಮಶ್ರೀ ನಡಕಟ್ಟಿನಗೆ ಸಚಿವ ಮುನೇನಕೊಪ್ಪ ಸನ್ಮಾನ

eNewsLand Team

ಧಾರವಾಡ: ಪಪಂ, ಪುರಸಭೆಲಿ ಕೋವಿಡ್-19 ಸಹಾಯವಾಣಿ ಆರಂಭ

eNewsLand Team