ಇಎನ್ಎಲ್ ಧಾರವಾಡ: ದಕ್ಷಿಣ ಕನ್ನಡ ಜಿಲ್ಲೆಯ ಹಿಜಾಬ್ ವಿವಾದ ಹುಬ್ಬಳ್ಳಿಗೂ ಕಾಲಿಟ್ಟಿದೆ. ಮುಸ್ಲಿಂ ಯುವತಿ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ಕೊಡಬೇಕು ಇಲ್ಲವಾದಲ್ಲಿ ಹುಬ್ಬಳ್ಳಿಯಿಂದ ಉಡುಪಿಗೆ ಬಂದು ಕಾಲೇಜಿನ ವಿರುದ್ಧ ಉಪವಾಸ ಸತ್ಯಾಗ್ರಹ ಚಳುವಳಿ ಮಾಡುವುದಾಗಿ ಇಲ್ಲಿನ ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಮಿನಿ ವಿಧಾನಸೌಧದ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ಸಿನ ಅಶ್ಪಾಕ್ ಎಂ. ಕುಮಟಾಕರ, ಉಡುಪಿ ಕಾಲೇಜಿನಲ್ಲಿ ಮುಸ್ಲಿಂ ಯುವತಿಯರಿಗೆ ಹಿಜಾಬ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿರ್ಬಂಧ ಹೇರಿದ ಕಾಲೇಜಿನ ಆಡಳಿತ ಹಾಗೂ ಕರ್ನಾಟಕ ಸರ್ಕಾರದ ನಡವಳಿಕೆ ಇಸ್ಲಾಂ ಧರ್ಮದ ವಿರುದ್ಧವಾಗಿದೆ.
ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಹಕ್ಕಾಗಿದೆ. ಅದನ್ನು ಪ್ರಶ್ನಿಸುವ ಹಕ್ಕು ನಿಮಗಿಲ್ಲ. ಹಿಜಾಬ್ ವ ಧರಿಸಿದರೆ ಏನು ತಪ್ಪು? ಉಡುಪಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಕರ್ನಾಟಕ ಸರಕಾರಕ್ಕೆ ನಾವು ಎಚ್ಚರಿಕೆಯನ್ನು ನೀಡುತ್ತೇವೆ. ನೀವು ಆದಷ್ಟು ಬೇಗನೆ ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಒತ್ತಾಯ ಮಾಡಿದರು.