34 C
Hubli
ಏಪ್ರಿಲ್ 19, 2024
eNews Land
ಜಿಲ್ಲೆ

ಬೈಪಾಸ್ ರಸ್ತೆ ಅಗಲೀಕರಣ ಕಾಲಮಿತಿಯೊಳಗೆ ಕಾಮಗಾರಿ-ಸಚಿವ ಹಾಲಪ್ಪ ಆಚಾರ್

ಇಎನ್ಎಲ್ ಹುಬ್ಬಳ್ಳಿ

ನಿನ್ನೆ ರಾತ್ರಿ ಹುಬ್ಬಳ್ಳಿಯ ರೇವಡಿಹಾಳ ಬೈಪಾಸ್ ನಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. 29 ಜನರಲ್ಲಿ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. 5 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ತಮ್ಮ ಊರುಗಳಿಗೆ ತೆರಳಿದ್ದಾರೆ. ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಬೈಪಾಸ್ ಅಗಲೀಕರಣ ಕಾಮಗಾರಿ ಕಾಲಮಿತಿಯೊಳಗೆ ನಡೆಯಲಿದೆ ಎಂದು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಹೇಳಿದರು. ‌

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ರಸ್ತೆ ಅಪಘಾತ ನಿಯಂತ್ರಣ, ಬೈಪಾಸ್ ಅಗಲೀಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಳೆದ ಎರಡು ತಿಂಗಳ ಹಿಂದೆ ಕೆಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಜೂನ್ 3 ರಿಂದ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಎರಡು ವರ್ಷದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಯನ್ನು ಅಗಲೀಕರಣ ಮಾಡಲಿದೆ. ಜನರಿಗೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು

ಹುಬ್ಬಳ್ಳಿ; ಜವರಾಯ ಅಟ್ಟಹಾಸ, ಅಪಘಾತ ಎಂಟಕ್ಕೇರಿದ ಸಾವು

ಬೈಪಾಸ್ ರಸ್ತೆ ಚಿಕ್ಕದಾಗಿದ್ದು, ವಾಹನಗಳ ಓಡಾಟ ಸಂಖ್ಯೆ ಹೆಚ್ಚಾಗಿರುತ್ತದೆ‌. ಚಾಲಕರ ನಿರ್ಲಕ್ಷ್ಯ, ಬೇಜವಾಬ್ದಾರಿಯಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ. ರಸ್ತೆಯ ಪಕ್ಕದಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಲಾಗುವುದು. ರಸ್ತೆ ಕಾಮಗಾರಿ ಮುಗಿಯುವವರೆಗೂ ಜನರ ಸಹಕಾರ ಬಹಳ ಮುಖ್ಯ. ಉತ್ತರ ಕರ್ನಾಟಕ ಜನರಿಗೆ ಕಿಮ್ಸ್ ಉತ್ತಮ ಸೇವೆ ನೀಡುತ್ತಿದೆ. ಕಿಮ್ಸ್ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಮಂತ್ರಿಗಳಿಗೆ ತಿಳಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ,ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಥಾನಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ್ ಮಾಡ್ಯಾಳ, ಅಪರ ತಹಶೀಲ್ದಾರ ಸಂತೋಷ ಹಿರೇಮಠ, ಸೇರಿದಂತೆ ಇತರ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

Related posts

ಅಗಡಿ ಗ್ರಾಮದಲ್ಲಿ ವಿಶೇಷ ಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

eNewsLand Team

ಅಣ್ಣಿಗೇರಿ ಪುರಸಭೆ ಚುನಾವಣೆ: ಮೂರು ದಿನ ಮದ್ಯ ಬ್ಯಾನ್!!

eNewsLand Team

ಹುಬ್ಬಳ್ಳಿ; ಜ.4 ಮತ್ತು 5 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

eNewsLand Team