29 C
Hubli
ಏಪ್ರಿಲ್ 26, 2024
eNews Land
ಜಿಲ್ಲೆ

ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸಿ -ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ

ಇಎನ್ಎಲ್ ಧಾರವಾಡ:

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಜನವರಿ 12 ರಂದು ಜರುಗಲಿರುವ ಪ್ರಧಾನಮಂತ್ರಿಗಳ ಕಾರ್ಯಕ್ರಮ ಹಾಗೂ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಜವಾಬ್ದಾರಿಯಿಂದ ಯಶಸ್ವಿಗೊಳಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಅಪರ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡ ಜಿಲ್ಲಾಡಳಿತಕ್ಕೆ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿಂದು ಈ ಕುರಿತು ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಈವರೆಗೆ ಕೈಗೊಂಡ ಸಿದ್ಧತೆಗಳ ರೂಪು ರೇಷೆಗಳ ಬಗ್ಗೆ ವಿವರಿಸಿದರು. ಹುಬ್ಬಳ್ಳಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಸುರಕ್ಷತೆ, ವೇದಿಕೆ, ಆರೋಗ್ಯ ತಂಡ, ಅಗತ್ಯತೆಗಳ ಬಗ್ಗೆ ಚರ್ಚಿಸಲಾಯಿತು. ಯುವಜನೋತ್ಸವದ ಕುರಿತು ಆಹಾರ, ವಸತಿ, ಸಾರಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಯಾವುದೇ ಲೋಪದೋಷಗಳಾಗದಂತೆ ಜವಾಬ್ದಾರಿಯಿಂದ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣ ಗುಪ್ತಾ, ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಟಕೃಷ್ಣ.ಬಿ., ಪೊಲೀಸ್ ಉಪ ಆಯುಕ್ತ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ರೈಲ್ವೇ ಹಾಗೂ ಏರ್‍ಪೋರ್ಟ್ ಅಧಿಕಾರಿಗಳು ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಮನೆ ಚಿಲಕ ಇನ್ನಷ್ಟು ಭದ್ರಪಡಿಸಿ; ಹುಬ್ಬಳ್ಳಿಲಿ ಮನೆಗೆ‌ ಕನ್ನ ಹಾಕಿದ ಕಳ್ಳರು ದೋಚಿದ್ದೆಷ್ಟು ನೋಡಿ!?

eNewsLand Team

ಮತದಾನ ಸಿದ್ಧತೆ ಪೂರ್ಣ ; ಒಟ್ಟು 15,23,080 ಮತದಾರರು; 1,642 ಮತಗಟ್ಟೆಗಳು, ಮತಗಟ್ಟೆಗಳಿಗೆ 8,319 ಸಿಬ್ಬಂದಿಗಳ ನಿಯೋಜನೆ; ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ

eNewsLand Team

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

eNewsLand Team