22 C
Hubli
ಅಕ್ಟೋಬರ್ 1, 2023
eNews Land
ಜಿಲ್ಲೆ ಸುದ್ದಿ

ಶಿಕ್ಷಕರ ಮತಕ್ಷೇತ್ರ : ಮತದಾರರ ಹೆಸರು ಸೇರಿಸಲು ಅವಕಾಶ

ಇಎನ್ಎಲ್ ಧಾರವಾಡ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಾಮಪತ್ರ ಸ್ವೀಕೃತಿಯ ಕೊನೆಯ ದಿನದವರೆಗೂ ಅವಕಾಶವಿದೆ. ನಮೂನೆ 19 ರಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಚುನಾವಣಾಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಿ ಸಾರ್ವಜನಿಕರ ಮಾಹಿತಿಗಾಗಿ ಜನೆವರಿ 17 ರಂದು ಪ್ರಕಟಿಸಲಾಗಿದೆ. ಪ್ರಸ್ತುತ ಮತದಾರರ ಪಟ್ಟಿಯನ್ನು ನಿರಂತರವಾಗಿ ಕಾಲೋಚಿತಗೊಳಿಸಲು ಪ್ರಜಾ ಪ್ರತಿನಿಧಿ ಕಾಯ್ದೆ 1950ರ ಕಲಂ 22,23 ಹಾಗೂ ಭಾರತ ಚುನಾವಣಾ ಆಯೋಗವು 2016 ರಲ್ಲಿ ಹೊರಡಿಸಿದ ಮ್ಯಾನ್ಯುಯಲ್ ಆನ್ ಎಲೆಕ್ಟೋರಲ್ ರೋಲ್‍ನ ಅಧ್ಯಾಯ 12 ರಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದೆ.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅರ್ಹ ಮತದಾರರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಕೋರಿದ್ದಾರೆ.

Related posts

ಹಾನಗಲ್ ಉಪಚುನಾವಣೆ ಫಲಿತಾಂಶ?

eNEWS LAND Team

ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

eNEWS LAND Team

ಕೇಂದ್ರ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

eNEWS LAND Team