27 C
Hubli
ಮೇ 25, 2024
eNews Land
ದೇಶ ಸುದ್ದಿ

ಇಂದು ಏ.28 ಅಣ್ಣಿಗೇರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮನಕ್ಕೆ ಕಾಯುತ್ತಿರುವ ಜನ!!!

ಇಎನ್ಎಲ್ ಅಣ್ಣಿಗೇರಿ: ಬಿಜೆಪಿ ಅಭ್ಯರ್ಥಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪರ ಚುನಾವಣೆ ಪ್ರಚಾರ ಸಭೆಯನ್ನು ಆಯೋಜಿಸಿದ್ದಾರೆ. ಪಟ್ಟಣದ ಶಾಸಕರ ಮಾದರಿ ಕೇಂದ್ರ ಶಾಲೆ ಆವರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆ ಪ್ರಚಾರ ನಿಮಿತ್ಯ ಏ.28 ರಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, 25 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ಸಾಧ್ಯತೆಯಿದೆ. ಆ ಹಿನ್ನಲೆಯಲ್ಲಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಭಾಗವಹಿಸುವರು. ನವಲಗುಂದ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಜ್ಯ ರೈತಮೊರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸ್ಥಳೀಯ 171ನೇ ಬೂತ್ ಬಿಜೆಪಿ ಕಾರ್ಯಲಯದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ವೇಳೆ ಷಣ್ಮುಖ ಗುರಿಕಾರ, ಶಿವಾನಂದ ಹಾಳದೋಟರ, ರಾಘವೇಂದ್ರ ರಾಮಗಿರಿ, ಶಿವಯೋಗಿ ಸುರಕೋಡ, ಶಿವಾನಂದ ಹೊಸಳ್ಳಿ, ಬಸವರಾಜ ಮಠದ, ದೇವರಾಜ ದಾಡಿಬಾಯಿ, ಜಗನ್ನಾಥ ಚುಕ್ಕಿ ಸೇರಿದಂತೆ ಕಾರ್ಯಕರ್ತರಿದ್ದರು.   

Related posts

ತೊಗರಿ ಬೆಳೆಯಲ್ಲಿ ಉತ್ತಮ ಇಳುವರಿಗೆ ಏನು ಮಾಡಬೇಕು?

eNEWS LAND Team

ಲಿಂಗಪತ್ತೆ ಹಾಗೂ ನಕಲಿ ವೈದ್ಯರ ಮೇಲೆ ಕಠಿಣ ಕ್ರಮಕೈಗೊಳ್ಳಿ ಆಸ್ಪತ್ರೆಗಳ ಸೇವೆಗಳ ಬಗ್ಗೆ ದರಪಟ್ಟಿ ಪ್ರದರ್ಶನ ಕಡ್ಡಾಯ: ಡಿಸಿ ಸಂಜಯ ಶೆಟ್ಟೆಣ್ಣವರ

eNEWS LAND Team

ಲೋಕ ಅದಾಲತ್: 31,301 ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ: ನ್ಯಾ.ಮಲ್ಲಿಕಾರ್ಜುನ ಗೌಡ

eNEWS LAND Team