29 C
Hubli
ಸೆಪ್ಟೆಂಬರ್ 26, 2023
eNews Land
ದೇಶ

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಸಮ್ಮೇಳನ

ಇಎನ್ಎಲ್ ಬ್ಯೂರೋ

ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆಯಲಿರುವ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ 51ನೇ ಸಮ್ಮೇಳನದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಲ್ಲ ರಾಜ್ಯಗಳ ರಾಜ್ಯಪಾಲರು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳ ಸಮ್ಮೇಳನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗವಹಿಸಲಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ರಾಜ್ಯಪಾಲರ ಸಮ್ಮೇಳನ ನಡೆಸುವುದು ಒಂದು ಸಂಪ್ರದಾಯ. 1949ರಲ್ಲಿ ರಾಷ್ಟ್ರಪತಿ ಭವನದಲ್ಲಿ ಮೊದಲ ಸಮ್ಮೇಳನ ನಡೆದಿತ್ತು. ಭಾರತದ ಕೊನೆಯ ಗವರ್ನರ್‌ ಜನರಲ್‌ ಆಗಿದ್ದ ಸಿ.ರಾಜಗೋಪಾಲಾಚಾರಿ ಇದರ ಅಧ್ಯಕ್ಷತೆ ವಹಿಸಿದ್ದರು

Related posts

ದ ಕಾಶ್ಮೀರ ಫೈಲ್ಸ್: ಕಲಾವಿದೆಗೆ ಗುಂಡಿಕ್ಕಿದ ನರರಾಕ್ಷಸರು!!

eNewsLand Team

ಕ್ಯಾಪ್ಟನ್ ವರುಣ್ ಸಿಂಗ್ ನಿಧನ: ದೇಶಕ್ಕೆ ತುಂಬಲಾರದ ನಷ್ಟ: ಸಿಎಂ

eNEWS LAND Team

ಜಾಗತಿಕ ಯುದ್ಧ ವಿಧಾನಕ್ಕೆ ತಕ್ಕಂತೆ ಬದಲಾಗಬೇಕಿದೆ: ಪ್ರಧಾನಿ ಮೋದಿ

eNEWS LAND Team