27.5 C
Hubli
ಏಪ್ರಿಲ್ 19, 2024
eNews Land
ಕೃಷಿ ದೇಶ

ಕೃಷಿ ಕಾಯಿದೆ ಹಿಂಪಡೆತದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಇಎನ್ಎಲ್ ಹುಬ್ಬಳ್ಳಿ

ಚುನಾವಣೆ ಆಧಾರದ ಮೇಲೆ ಕೃಷಿ ಕಾಯಿದೆ ಹಿಂಪಡೆಯುವ ನಿರ್ಧಾರ ಕೈಗೊಂಡಿಲ್ಲ. ಆ ಸಂದರ್ಭದಲ್ಲಿ ಏನೆಲ್ಲಾ ಆಯ್ತು ಅನ್ನೋದು ಬೇರೆ

ಆದರೆ ಒಣ ಪ್ರತಿಷ್ಠೆಗೆ ಒಳಗಾಗದೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಾವುದೇ ಚುನಾವಣೆ ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ. ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು ನಿಜ. ಆದರೆ ರೈತರ ಹಿತಕ್ಕೆ ಇದಕ್ಕೆ ಈಗ ನಿಷೇಧ ಮಾಡಲಾಗಿದೆ ಎಂದರು.

ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ. ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. ರೈತ ಸಮೂಹಕ್ಕೆ ಒಂದೊಳ್ಳೆ ತೀರ್ಮಾನದ ಮೂಲಕ ಖುಷಿ ಕೊಟ್ಟಿದ್ದಾರೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತರದವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದರು.

ಬಿಟ್ ಕಾಯಿನ್ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಪ್ರಧಾನಿ ಸಹ ಹೇಳಿದ್ದಾರೆ

ಇದೊಂದು ಅಕ್ಷಮ್ಯ ಅಪರಾಧ, ಯಾರೇ ತಪ್ಪು ಮಾಡಿದ್ರು ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.

ಯಾವುದೇ ಕಡಿವಾಣ ನನಗೆ ಹಾಕಿಲ್ಲ

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಹಿಂದೆ ಮುಂದೆ ನೋಡುತ್ತಾರೆ.

ಆದರೆ ನಾನು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಬಂದಿದ್ದೇನೆ. ರಾಜ್ಯದ ಉದ್ದಗಲಕ್ಕೂ ಸಹ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೇ ಹೋದರೂ ನಮ್ಮ ಯಡಿಯೂರಪ್ಪ ಅಂತ ಅಭಿಮಾನ ತೋರಿಸುತ್ತಿದ್ದಾರೆ.

ಇತ್ತೀಚೆಗೆ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿದೆ. ಅವರ ಸಂಕಷ್ಟಕ್ಕೆ ನಾವು ಸಹ ಸಹಕರಿಸಲಿದ್ದೇವೆ. ಈ ಮಳೆಯ ಅಬ್ಬರದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಮಸ್ಯೆಯಾಗಿದೆ

ಬೆಂಗಳೂರು ಸೇರಿದಂತೆ ಎಲ್ಲ ಕಡೆ ಇದೆ ಪರಸ್ಥಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

Related posts

ಅಮೂಲ್ ಜೊತೆ ನಂದಿನಿ ವಿಲೀನ ಪ್ರಸ್ತಾಪವೇ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

eNEWS LAND Team

2021-22ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭ ; ರೈತರೇ ಸ್ವತ: ಬೆಳೆ ಸಮೀಕ್ಷೆ ಮಾಡಬಹುದು

eNEWS LAND Team

ಪಕ್ಷಾತೀತ ರೈತ ಹೋರಾಟ ಸಮಿತಿಯಿಂದ ಪ್ರತಿಭಟನೆ

eNEWS LAND Team