23.8 C
Hubli
ಮಾರ್ಚ್ 28, 2023
eNews Land
ದೇಶ

ಉಗ್ರರ ದಾಳಿಗೆ ಐವರು ಯೋಧರು ಬಲಿ

Listen to this article

ಇಎನ್ಎಲ್ ಬ್ಯೂರೋ

ಶ್ರೀನಗರ್: ನಾಲ್ಕು ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ ಐವರು ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ(ಅಕ್ಟೋಬರ್ 14) ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಗೆ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಉಗ್ರರ ವಿರುದ್ಧದ ಕೂಂಬಿಂಗ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್, ರಾಜೇರಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ವರದಿ ಹೇಳಿದೆ. ಉಗ್ರರ ಗುಂಪು ಮತ್ತೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಅ.10ರಂದು ನಡೆದ ದಾಳಿಯಲ್ಲಿ ಸೇನಾ ಅಧಿಕಾರಿ ಹಾಗೂ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಪೂಂಚ್ ಜಿಲ್ಲೆ ಮೆಂಧಾರ್ ಉಪ ವಿಭಾಗದ ನಾರ್ ಖಾಸ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸೇನೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಡಿ.6ಕ್ಕೆ ಮೋದಿ-ಪುಟಿನ್ ಮುಖಾಮುಖಿ

eNewsLand Team

ರಾಷ್ಟ್ರಪತಿಗಳಿಂದ ಸೆ.26 ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

eNEWS LAND Team

ಪೆಟ್ರೋಲ್, ‌ಡೀಸೆಲ್ ಬೆಲೆ ಇಳಿಕೆ, ಇಂದು ಸಂಜೆ ಅಧಿಸೂಚನೆ: ಸಿಎಂ

eNEWS LAND Team