34 C
Hubli
ಏಪ್ರಿಲ್ 19, 2024
eNews Land
ಜನಪದ ದೇಶ ರಾಜ್ಯ ವಿದೇಶ ಸುದ್ದಿ

ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಗೌರವ ಅಧ್ಯಕ್ಷ ಸತೀಶ್ ಭದ್ರಣ್ಣ ನೇಮಕ

ಆಸ್ಟ್ರೇಲಿಯಾ ದೇಶದ ಕಸಾಪ ಘಟಕದ ಗೌರವಾಧ್ಯಕ್ಷರಾಗಿ ಸತೀಶ್ ಭದ್ರಣ್ಣ ಅವರನ್ನು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಆದೇಶ ಪ್ರತಿ ಹಸ್ತಾಂತರಿಸಿದ್ದಾರೆ.

ಇಎನ್ಎಲ್ ಬೆಂಗಳೂರು: ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಹೊರದೇಶ ಘಟಕದ ಗೌರವ ಅಧ್ಯಕ್ಷರಾಗಿ ಸತೀಶ್ ಭದ್ರಣ್ಣ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.

ಕರ್ನಾಟಕದ ರಾಜಧಾನಿ ಯಾವುದು?

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು, ಎಲ್ಲ ಕನ್ನಡ ಸಂಘ-ಸಂಸ್ಥೆಗಳ ಮಾತೃ ಸಂಸ್ಥೆಯಾಗಿದೆ.

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ
ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷಾವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ತಿದ್ದುಪಡಿ ತಂದು ವಿದೇಶಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಅವಕಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿದೇಶಗಳಲ್ಲಿ ಘಟಕಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುತ್ತಿದೆ. ಕನ್ನಡಿಗರು ಹೆಚ್ಚಾಗಿರುವ ವಿದೇಶಿ ನೆಲದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳನ್ನು ಸ್ಥಾಪಿಸುವ ಮೂಲಕ ಪ್ರಪಂಚದಲ್ಲಿರುವ ಎಲ್ಲ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿದೆ.

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ
ಆಸ್ಟ್ರೇಲಿಯಾದಲ್ಲಿ ಕನ್ನಡಪರ ಕಾರ್ಯಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಡೆಸುವುದರ ಮೂಲಕ ಕನ್ನಡ ನಾಡು-ನುಡಿಯ ಸೇವೆಯನ್ನು ಸಲ್ಲಿಸುತ್ತಿರುವ ಸತೀಶ ಭದ್ರಣ್ಣ ಅವರಿಂದ ಹೆಚ್ಚು ಹೆಚ್ಚು ಕನ್ನಡ ಭಾಷೆ, ಕಲೆ- ಸಂಸ್ಕೃತಿ, ಸಾಹಿತ್ಯದ ಏಳಿಗೆಗೆ ಇನ್ನಷ್ಟು ಸೇವೆ ನೀಡಲಿದ್ದಾರೆ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಆಶಿಸಿದ್ದಾರೆ.

ಕನ್ನಡ ಶಾಲೆ ಉಳಿವಿಗೆ ಕಸಾಪ ಹೋರಾಟಕ್ಕೂ ಸಿದ್ಧ, ಮಾದರಿ ಶಾಲೆ ನೆಪವೊಡ್ಡಿ ಕನ್ನಡ ಶಾಲೆ ಮುಚ್ಚಬೇಡಿ: ನಾಡೋಜ ಡಾ.ಮಹೇಶ ಜೋಶಿ
ಈ ಹಿಂದೆ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರೆಲ್ಲರ ಪ್ರೀತಿಗೆ ಪಾತ್ರರಾಗಿದ್ದ ಚಂದ್ರ ಆರ್ಯ ಅವರನ್ನು ಕೆನಡಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿರುವುದನ್ನು ಡಾ.ಮಹೇಶ ಜೋಶಿ ಸ್ಮರಿಸಿದ್ದಾರೆ ಎಂದು ಕಸಾಪ ಮಾಧ್ಯಮ ಸಲಹೆಗಾರ ಶ್ರೀನಾಥ.ಜೆ ಪ್ರಕಣೆಗೆ ತಿಳಿಸಿದ್ದಾರೆ.

ಸಾಕ್ಷರತಾ ಕಾರ್ಯಕ್ರಮಗಳ ಅನುಷ್ಠಾನ: ಸಾಮೂಹಿಕ ಜವಾಬ್ದಾರಿ

Related posts

ಕನ್ನಡ ಸಮೃದ್ದ ತಾಂತ್ರಿಕ ಭಾಷೆಯಾಗುವ ಅಗತ್ಯವಿದೆ : ಸಚಿವ ಕತ್ತಿ

eNEWS LAND Team

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

eNEWS LAND Team

ಮಾಡುವಂತಿರಬೇಕು ಮಾಡದಂತಿರಬೇಕು, ಮಾಡುವ ಮಾಟದೊಳಗೆ ತಾನಿಲ್ಲದಂತಿರಬೇಕು.

eNEWS LAND Team