23.9 C
Hubli
ಏಪ್ರಿಲ್ 1, 2023
eNews Land
ಸುದ್ದಿ

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

Listen to this article

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

ಇಎನ್ಎಲ್ ಧಾರವಾಡ

ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಖಾಸಗಿ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಅವರು ,ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬೆಂಗಳೂರು ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಿಗೆ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ.ಕೋವಿಡ್ ವರದಿ ನೆಗೆಟಿವ್ ಇದ್ದರೂ ಸಹ ಕನಿಷ್ಠ ಒಂದು ವಾರ ಕಾಲ ತಮ್ಮ ಮನೆಗಳಲ್ಲಿಯೇ ಇರಲು ಅಂತಹ ಪ್ರಯಾಣಿಕರಿಗೆ ಸೂಚಿಸಲಾಗಿದೆ.ಅವರ ಚಲನ ವಲನಗಳ ಮೇಲೆಯೂ ನಿಗಾವಹಿಸಲಾಗಿದೆ ಎಂದರು.

ನಾಳೆ ಡಿಸೆಂಬರ್ 2 ರಂದು ನವದೆಹಲಿ ಪ್ರವಾಸ ಕೈಗೊಳ್ಳಲಾಗುತ್ತಿದೆ.ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ನಿರೋಧಕ ಮೊದಲ ಮತ್ತು ಎರಡನೇ ಡೋಸ್ ನೀಡಿ 6-7 ತಿಂಗಳುಗಳಾಗಿರುವುದರಿಂದ ಈಗ ಬೂಸ್ಟರ್ ಡೋಸ್ ನೀಡಬಹುದೇ ಎಂಬುದರ ಕುರಿತು ಚರ್ಚಿಸಲಾಗುವುದು. ಕೇರಳ ಗಡಿಯಲ್ಲಿ ಬಿಗಿ ಕ್ರಮಗಳನ್ನು ಜಾರಿ ಮಾಡಲಾಗಿದೆ.

ಕಳೆದ ವಾರ ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಕೋವಿಡ್ ನಿಯಂತ್ರಿಸಲು ಆಸ್ಪತ್ರೆ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿನ 1 ಸಾವಿರ ಜನರನ್ನೂ ಸೇರಿ, ಸುಮಾರು 7 ಸಾವಿರ ಜನರನ್ನು ತಪಾಸಣೆ ಮಾಡಲಾಗಿದೆ.ಅವರಲ್ಲಿ 306 ಜನರಲ್ಲಿ ಸೋಂಕು ದೃಢವಾಗಿದೆ.ಏಳು ದಿನಗಳ ನಂತರ ಮತ್ತೆ ಅವರನ್ನು ಪರೀಕ್ಷೆ ಮಾಡಿದಾಗ ಇಬ್ಬರಲ್ಲಿ ಮಾತ್ರ ಸೋಂಕು ಕಂಡು ಬಂದಿದೆ.

ಕೋವಿಡ್ ಕಾರಣದಿಂದಾಗಿ ಹೊಸ ತಾಲೂಕುಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ವಿಳಂಬವಾಗಿದೆ.ಕಚೇರಿ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು. ಕೋವಿಡ್ ನಿಯಂತ್ರಣಕ್ಕೆ ಮತ್ತೆ ಲಾಕ್ ಡೌನ್ ಮಾಡುವ ವಿಚಾರ ಇಲ್ಲ, ಆತಂಕ ಪಡಬೇಕಾಗಿಲ್ಲ.ಆರ್ಥಿಕ ಚಟುವಟಿಕೆಗಳಿಂದ ಜನತೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ವಿವರಿಸಿದರು.

Related posts

ಸಿದ್ಧಾರೂಢ ಮಠದಲ್ಲಿ ಶಿವರಾತ್ರಿ, ಜಾತ್ರಾ ಸಪ್ತಾಹ ಆರಂಭ: ಮೊದಲ ದಿನ ಅಲಂಕಾರ, ವಿಶೇಷ ಪೂಜೆ, ಪ್ರವಚನ

eNewsLand Team

ಹುಬ್ಬಳ್ಳಿ ಧಾರವಾಡದಲ್ಲಿ ಕ್ರಿಸ್‌ಮಸ್‌ ಮೆರುಗು

eNewsLand Team

ಅಣ್ಣಿಗೇರಿ ರತ್ನ ಪ್ರಶಸ್ತಿ ಪ್ರದಾನ

eNEWS LAND Team