ಇಎನ್ಎಲ್ ಬಾಗಲಕೋಟೆ:
ಸರ್ಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು, ತಾಲೂಕಿನ ಮುರನಾಳ ಆರ್.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.
ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಶೇಂಗಾ ಉಂಡೆ ಮತ್ತು ಬೇಯಿಸಿದ ತತ್ತಿಯನ್ನು ನೀಡಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ಮಕ್ಕಳ ಮತ್ತು ತಾಯಂದಿರ ಮರಣ ಕಡಿಮೆಗೊಳಿಸುವುದು, ವಿವಿಧ ಇಲಾಖೆಯಗ ಸಹಕಾರದಿಂದ ಅಂಗನವಾಡಿ ಮಕ್ಕಳ ಸರ್ವತೋಮುಖ ಬೆಳೆವಣಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದೆಂದರು. ಆರೋಗ್ಯ ತಪಾಸಣೆ, ಪೌಷ್ಠಿಕ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಯೋಜನೆಗಳು ಯಶಸ್ವಿಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪನಾಧಿಕಾರಿ ರಮೇಶ ಸೂಳಿಕೇರಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಮುರನಾಳ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಮಹಾಂತೇಶ ನಾಲತ್ವಾಡ ಸೇರಿದಂತೆ ಇತರರು ಉಪಸ್ಥಿತರಿದ್ದರು.