26 C
Hubli
ಏಪ್ರಿಲ್ 20, 2024
eNews Land
ರಾಜ್ಯ ಸುದ್ದಿ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ನಮ್ಮ ಕೆಲಸ, ಆಡಳಿತದ ಆಧಾರದ ಮೇಲೆ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ವೈಯ್ಯಾಲಿಕಾವಲ್ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದೂ ಧರ್ಮದಲ್ಲಿ ಪವಿತ್ರವಾದ ದಿನ. ಇಂದು ವೆಂಕಟೇಶ್ವರನ ದರ್ಶನ ಮಾಡಬೇಕೆಂದು ಪ್ರತೀತಿ. ತಿರುಪತಿಗೆ ಹೋಗಲು ಸಾಧ್ಯವಿಲ್ಲ ದಿರುವರರಿಂದ ಟಿ ಟಿ ಡಿ ಯವರ ದೇವಸ್ಥಾನಕ್ಕೆ ಬಂದು ಪುನೀತ ಭಾವನೆ ಮೂಡಿದೆ. ಕರ್ನಾಟಕದ ಜನತೆ ಅಭಿವೃದ್ಧಿ, ಸಮೃದ್ಧಿಯಾಗುವಂತೆ ದೇವರಲ್ಲಿ ಬೇಡಿಕೊಂಡಿದ್ದು, ಖಂಡಿತವಾಗಿ 2023 ರಲ್ಲಿ ವೆಂಕ್ತೇಶ್ವನ ಆಶೀರ್ವಾದ ಇರುತ್ತದೆ. ವೆಂಕಟೇಶ್ವರ ಎಂದರೆ ಅಭಿವೃದ್ಧಿ, ಸಮೃದ್ಧಿಯ ಸಂಕೇತ. ಕರ್ನಾಟಕ ಹಿಂದೆಂದೂ ಕಾಣದ ಅಭಿವೃದ್ಧಿ ಕಾಣಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ಉದ್ಯಮಿ ಪ್ರದೀಪ್ ಅವರು ಶಾಸಕ ಅರವಿಂದ ಲಿಂಬಾವಳಿ ಯವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದುಎಫ್.ಐ.ಆರ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕ್ರಿಯೆ ಏನಾಗಬೇಕೋ ಆಗಿದೆ. ಮುಂದೂ ಕೂಡ ಕಾನೂನು ಪ್ರಕಾರವಾಗಿ ಆಗಲಿದೆ ಎಂದರು.

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ನಿರಂತರ ಮಾಹಿತಿ: ಸಿದ್ದೇಶ್ವರ ಶ್ರೀಗಳ ಆರೋಗ್ಯದ ಬಗ್ಗೆ ಮಾತನಾಡಿ ಅವರನ್ನು ಭೇಟಿ ಯಾದಾಗ ಗುರುತು ಹಿಡಿದರು. ಮಾತನಾಡಲು ಆಗುತ್ತಿರಲಿಲ್ಲ ಎನ್ನುವುದನ್ನು ಬಿಟ್ಟರೇ ಅವರ ಎಲ್ಲಾ ಅಂಗಾಂಗಗಳ ಮಾನದಂಡಗಳು ಸಾಮಾನ್ಯವಾಗಿಯೇ ಇತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡಿದಾಗ ಧ್ವನಿ ಗುರುತು ಹಿಡಿದು ಶುಭ ಕೋರಿದರು. ಇಂದೂ ಕೂಡ ಅವರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಸಂಬಂಧ ಪಟ್ಟವರ ಸಂಪರ್ಕದಲ್ಲಿದ್ದೇನೆ. ಯಾವುದೇ ಆತಂಕಕ್ಕೆ ಅವಕಾಶವಿಲ್ಲ. ಸಿದ್ಧೇಶ್ವರ ಸ್ವಾಮಿಗಳಿಗೆ ಅವರದ್ದೇ ಆದ ಅಂತರ್ಗತ ಶಕ್ತಿ ಇದೆ. ಅದರ ಮೂಲಕ ಅನಾರೋಗ್ಯವನ್ನು ಗೆದ್ದು ಜಯಶಾಲಿಯಾಗಿ ಬರುತ್ತಾರೆ. ದೀರ್ಘಕಾಲ ನಮ್ಮ ಜೊತೆಗಿದ್ದು, ಆಶೀರ್ವಾದ ಮಾರ್ಗದರ್ಶನ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

Related posts

ಚನ್ನಪಟ್ಟಣದ ಜೀಪು ಖರೀದಿಸಿದ ಸಿಎಂ ಬೊಮ್ಮಾಯಿ

eNewsLand Team

ಲೋಕ ಅದಾಲತ್: 31,301 ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ: ನ್ಯಾ.ಮಲ್ಲಿಕಾರ್ಜುನ ಗೌಡ

eNEWS LAND Team

ಕೋವಿಡ್ ಹೊಸ ಅಲೆ ಎದುರಿಸಲು ಸಜ್ಜಾದ ನೈಋತ್ಯ ರೈಲ್ವೆ

eNEWS LAND Team