ಕುಮಾರಸ್ವಾಮಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ; ಸಿಎಂ ಬೊಮ್ಮಾಯಿ ಹೀಗೆ ಹೇಳಿದ್ಯಾಕೆ!?
ಇಎನ್ಎಲ್ ಧಾರವಾಡ
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಸಂಘಟನೆ,ಮುಂಬರೋ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ಏರ್ ಪೊರ್ಟ್ ನಲ್ಲಿ ಮಾತನಾಡಿದ ಅವರು, ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಲಾಗುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳಲಿದೆ ಎಂದರು.
ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನುವ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಎಂ.ಪಿ. ಕುಮಾರಸ್ವಾಮಿಗೆ ನನ್ ಮೇಲೆ ಬಹಳ ಪ್ರೀತಿ ಇದೆ. ಆದರೆ ನಾನು ವರ್ಷಪೂರ್ತಿ ಪ್ರತಿದಿನ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ.
2023 ರಕ್ಕೆ ಬಿಜೆಪಿ ಅಧಿಕಾರಕ್ಕೆ ತರೋದೆ ನನ್ನ ಗುರಿ.
ಈಗನಿಂದಲೇ ಅದನ್ನ ಸ್ಟಾರ್ಟ್ ಮಾಡ್ತೇನೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಕೇಂದ್ರ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದರು.
ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎನ್ನೊ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,
ನಾವು, ನಮ್ಮ ಪಕ್ಷ, ನಮ್ಮದೇ ಆದ ತಂಡ ಇದೆ.
ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೆವೆ ಎಂದರು.
ಬಿಡಿಎ ಭ್ರಷ್ಟಾಚಾರ ಎಸಿಬಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.