22.3 C
Hubli
ಜೂನ್ 13, 2024
eNews Land
ಸುದ್ದಿ

ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

ಇಎನ್ಎಲ್ ಹುಬ್ಬಳ್ಳಿ: ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ದಾಗ 2-3 ಬಾರಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದು ಬಿಜೆಪಿಯ ಜನ್ಮ ನಕ್ಷತ್ರದಲ್ಲಿಯೇ ಬರೆದಿದೆ ಎಂದು ಧಾರವಾಡ ವಿಧಾನಸಭಾ ಕ್ಷೇತ್ರದ ಚುನಾವಣೆ ವೀಕ್ಷಕ, ಎಂಎಲ್‌ಸಿ ಬಿ.ಕೆ. ಹರಿಪ್ರಸಾದ ಟೀಕಿಸಿದರು.

ನಗರದ ಕಾರವಾರ ರಸ್ತೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಏರ್ಪಡಿಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿಂದೆ ಮೂವರು ಸಿಎಂಗಳಾಗಿದ್ದರು. ಈ ಬಾರಿ ಎರಡನೇ ಸಿಎಂ ನೋಡುತ್ತಿದ್ದೇವೆ. ಅವಧಿ ಮುಗಿಯುವುದರೊಳಗೆ ಇನ್ನೂ ಇಬ್ಬರು ಸಿಎಂ ಗಳಾದರೆ ಆಶ್ಚರ್ಯ ಪಡಬೇಕಾಗಿಲ್ಲ ಎಂದರು.

ವಿಪನಲ್ಲಿ ಕಾಂಗ್ರೆಸ್ ಬೆಂಬಲಿಸಿ: ಹಾನಗಲ್ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಯ ದೌರ್ಜನ್ಯ, ದಬ್ಬಾಳಿಕೆ ಸುಳ್ಳು ಭರವಸೆ, ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಇದೀಗಲೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತದಾರರು ಹೆಚ್ಚಿನ ಮತ ನೀಡಲಿದ್ದಾರೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿ ಹಣ, ಅಧಿಕಾರ, ತೋಳಬಲ ಪ್ರದರ್ಶನ ಮಾಡಿದ್ದಾರೆ. ಈ ಚುನಾವಣೆಯಲ್ಲಿಯೂ ಗ್ರಾಮೀಣ ಮಟ್ಟದಲ್ಲಿ ಆಮಿಷಗಳನ್ನಿ ನೀಡುತ್ತಿದ್ದಾರೆ. ಅದಕ್ಕೆ ಮಣಿಯದಿದ್ದರೆ ಭಯ ಹುಟ್ಟಿಸುವ ಕೆಲಸವನ್ನು ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದ ಸರ್ಕಾರ ಮಾಡುತ್ತಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಜನರು ಸಿಎಂ ಗೆ ತಮ್ಮ ಸ್ವಕ್ಷೇತ್ರದಲ್ಲಿ ಬುದ್ದಿ ಕಲಿಸಿದ್ದಾರೆ‌. ಇದೀಗ ವಿ.ಪ ಚುನಾವಣೆಯಲ್ಲಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ರಾಜೀವ್ ಗಾಂಧಿ ಅವರು ೭೩ ಹಾಗೂ ೭೪ ನೇ ತಿದ್ದುಪಡಿ ಮಾಡಿ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ಕೊಡುವ ಕೆಲಸ ಮಾಡಿದ್ದರು. ಆ ಅಧಿಕಾರ ಉಳಿಸಲು ಎಲ್ಲರೂ ಪ್ರಜಾಪ್ರಭುತ್ವ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠಗೊಳಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.

ರೈತರ ಬೇಡಿಕೆಗಳನ್ನು ಹತ್ತಿಕ್ಕಿವ ಹುನ್ನಾರವನ್ನು ಮಾಡಿದ್ದರು ಆದರೆ ಪ್ರಜಾಪ್ರಭುತ್ವದಲ್ಲಿ ಜನರ ಕೂಗನ್ನು ಮುಗಿಸಲು ಆಗವುದಿಲ್ಲ. ಹೀಗಾಗಿಯೇ ಮೊನ್ನ ನಡೆದ ಲೋಕ ಸಭೆ ಹಾಗೂ ರಾಜ್ಯ ಸಭೆಯಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆದುಕೊಂಡರು. ಅಲ್ಲದೇ ಯಾವುದೇ ವಿಷಯವನ್ನು ಚರ್ಚಿಸದೇ ತಿರ್ಮಾಣವನ್ನು ತಗೆದುಕೊಂಡಿದ್ದಾರೆ.
ಅತಿವೃಷ್ಟಿಯಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆಮ ಸರ್ಕಾರದ ಮಂತ್ರಿಗಳು ಪರಿಹಾರ ಕೊಡುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ರಾಷ್ಟ್ರದ ಬೆನ್ನಲಬು ರೈತನ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.

ಸಲೀಂ ಅಹ್ಮದ್ ವಿದ್ಯಾರ್ಥಿ ದಿಶೆಯಿಂದಲ್ಲೂ ನಾಯಕರಾಗಿದ್ದವರು. ಅವರೊಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಅವರಿಗೆ ವಿ.ಪ. ಚುನಾವಣೆ ಮತ ನೀಡಿದರೇ ಗೌರವ ಮತ್ತು ಗಣತೆ ಇರಲಿದೆ ಎಂದು ಭರವಸೆ ನೀಡಬಲ್ಲೆ ದ್ವಿಸದಸ್ಯ ಸ್ಥಾನಗಳಿಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಕೇವಲ ಒಂದು ಮತವನ್ನು ಚಲಾಯಿಶಬೇಕೆಂದು ತಿಳಿಸಿದರು.

ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ ಗೆಲವು ದೊರಕಿಸಿಕೊಡಬೇಕೆಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಅನಿಲಕುಮಾರ್ ಪಾಟೀಲ್, ಶಿವಾನಂದ ಕರಿಗಾರ, ಸತೀಶ್ ಮೆಹರವಾಡೆ, ಎಂ.ಎಸ್.ಅಕ್ಕಿ, ಪ್ರಕಾಶ ಬುರಬುರೆ, ಅನೀಲ ಸಾವಂತ್, ರಫೀಕ್ ಸಾವಂತ್ ಉಪಸ್ಥಿತರಿದ್ದರು.

Related posts

ಅಣ್ಣಿಗೇರಿ ತಾಲೂಕಿನ  ಸ್ವೀಪ್ ಸಮಿತಿ ಸಭೆ

eNewsLand Team

ಅಪಘಾತ ರಹಿತ ಬಸ್ ಚಾಲಕರು: “HEROS ON THE ROAD” ಚಾಲಕರೇ ತಪ್ಪದೇ ನೋಡಿ!

eNEWS LAND Team

ಹೆಲಿಕಾಪ್ಟರ್ ಪತನ; ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ನಿಧನ

eNewsLand Team