37 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಕೋವಿಡ್ 19 ನಿಯಂತ್ರಣಕ್ಕೆ ಸಿಎಂ ಸೂಚಿಸಿದ್ದೇನು?

ಕೋವಿಡ್ 19 ನಿಯಂತ್ರಣಕ್ಕೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ. ರಾಜ್ಯ ಕಾಪಾಡಲು ಸಿಎಂ ಹೇಳಿದ್ದೇನು? ಇಲ್ಲಿದೆ.

ಇಎನ್ಎಲ್ ಬೆಂಗಳೂರು:

• ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು

* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು

* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

• ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

• ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.

• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

• ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು

Related posts

ಏನಿದು ಟೆಂಪಲ್ ಟೂರಿಸಂ!? ಸಿಎಂ ಬೊಮ್ಮಾಯಿ ಹೇಳಿದ್ದೇನು?

eNewsLand Team

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ

eNEWS LAND Team

ಮಳೆ ಲೆಕ್ಕಿಸದೇ ಕೇಂದ್ರ ತಂಡ ಭೇಟಿ: ಚೆನ್ನಾಗಿ ಕೆಲಸ ಮಾಡಿದ್ದೀರಿ: ಅಂಕಿತ್ ಮಿಶ್ರಾ

eNEWS LAND Team