23 C
Hubli
ಸೆಪ್ಟೆಂಬರ್ 25, 2023
eNews Land
ಸುದ್ದಿ

ಧಾರವಾಡ ಜಿಲ್ಲೆಯ ವನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಗ್ರಾಮ  ವಾಸ್ತವ್ಯ

 

ಇಎನ್ಎಲ್ ಅ.16:
ಧಾರವಾಡ ಅ.13: ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ,ಇಂದು ಅ.16ರ ಶನಿವಾರದಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಧಾರವಾಡ ತಾಲೂಕಿನ ಕನಕೂರ ಗ್ರಾಮ ಪಂಚಾಯತ ವ್ಯಾಪ್ತಿಯ ವನಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿ ಪರಿಹರಿಸಲಿದ್ದಾರೆ.

ಬೆಳಿಗ್ಗೆ 9-30 ಗಂಟೆಗೆ ಕಚೇರಿಯಿಂದ ಹೊರಡುವ ಅವರು ಕನಕೂರ ಗ್ರಾಮ ಪಂಚಾಯತಿ ವ್ಯಾಪ್ತಿ ಗ್ರಾಮಗಳಾದ ಕವಲಗೇರಿ, ಚಂದನಮಟ್ಟಿ,ಕನಕೂರ, ತಲವಾಯಿ ಗ್ರಾಮಗಳ ಮಾರ್ಗವಾಗಿ ಸುಮಾರು 10-30 ಗಂಟೆಗೆ ಹೊತ್ತಿಗೆ ವನಹಳ್ಳಿ ಗ್ರಾಮ ತಲುಪಲಿದ್ದಾರೆ.
ವನಹಳ್ಳಿಯಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ,ವಾದ್ಯ ಮೇಳದೊಂದಿಗೆ ಎತ್ತಿನ ಬಂಡಿಯಲ್ಲಿ ಗ್ರಾಮ ಪ್ರವೇಶ ಮಾಡಿಸಲಿದ್ದಾರೆ.
ನಂತರ ಜಿಲ್ಲಾಧಿಕಾರಿಗಳು ಎಸ್.ಸಿ, ಎಸ್.ಟಿ, ಕಾಲೋನಿ, ಅಂಗನವಾಡಿ ಕೇಂದ್ರ, ಪಡಿತರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಲಿದ್ದಾರೆ.
ವನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ನಡೆಯಲಿದೆ.

ಕಂದಾಯ ಇಲಾಖೆ ಸಿಬ್ಬಂದಿಗಳು ಕನಕೂರ ಗ್ರಾಮ ಪಂಚಾಯತ ವ್ಯಾಪ್ತಿಯ ಐದು ಗ್ರಾಮಗಳ ಮನೆಮನೆಗೆ ಭೇಟಿ ನೀಡಿ, ಸಾರ್ವಜನಿಕರ ವಯಕ್ತಿಕ ಹಾಗೂ ಸಮುದಾಯ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತ ಕ್ರಮಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಿದ್ದಾರೆ. ನಾಳೆಯೂ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಎರಡು ಕೌಂಟರ್ ಗಳನ್ನು ತಾಲೂಕಾ ಆಡಳಿತ ತೆರೆಯಲಿದೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ಅರ್ಹ ಪಲಾನುಭವಿಗಳಿಗೆ ಜಿಲ್ಲಾಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ವಿತರಿಸಲಿದ್ದಾರೆ.
ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ತಹಸಿಲ್ದಾರ ಡಾ.ಸಂತೋಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

Related posts

ಹುಬ್ಬಳ್ಳಿ ಬಾಲ್ಯವಿವಾಹ; ಬ್ಲ್ಯಾಕ್ ಮೇಲ್

eNewsLand Team

ನವೀನ್ ಪಾರ್ಥಿವ ಶರೀರ ಸೋಮವಾರ ಬೆಂಗಳೂರಿಗೆ: ಸಿಎಂ ಬೊಮ್ಮಾಯಿ

eNEWS LAND Team

ಇಂದಿನಿಂದ ಜಿಲ್ಲಾದ್ಯಂತ 15 ರಿಂದ 18 ವರ್ಷದೊಳಗಿನವರಿಗೆ ಕೋವಿಡ್-19 ಲಸಿಕೆ

eNEWS LAND Team