29 C
Hubli
ಮೇ 2, 2024
eNews Land
ಸುದ್ದಿ

ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮತ್ತು ಕಾನೂನು, ಸುವ್ಯವಸ್ಥೆ ಕಾಪಾಡಲು 2,785 ಪೊಲೀಸ್ ಸಿಬ್ಬಂದಿ: ಎಸ್ಪಿ ಲೋಕೇಶ ಜಗಲಾಸರ್

ಇಎನ್ಎಲ್ ಧಾರವಾಡ: ಧಾರವಾಡ ಗ್ರಾಮೀಣ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮತ್ತು ಕಾನೂನು, ಸುವ್ಯವಸ್ಥೆ ಕಾಪಾಡಲು ವಿವಿಧ ಹಂತದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಒಟ್ಟು 2,785 ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಧಾರವಾಡ ಗ್ರಾಮೀಣ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 4 ವಿಧಾನಸಭಾ ಮತಕ್ಷೇತ್ರಗಳಲ್ಲಿ ಶಾಂತಿಯುತ, ಮುಕ್ತ ಚುನಾವಣೆ ಜರುಗಿಸಲು ಅಗತ್ಯವಿರುವ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 1,100 ಪೊಲೀಸ್ ಸಿಬ್ಬಂದಿಗಳನ್ನು, 400 ಹೋಂ ಗಾರ್ಡ್‍ಗಳನ್ನು, 9 ಜನ ಫಾರೆಸ್ಟ್ ಗಾರ್ಡ್‍ಗಳನ್ನು, 1,200 ಕೇಂದ್ರ ಪೊಲೀಸ್ ಪಡೆಯ ಸಿಬ್ಬಂದಿಯನ್ನು, ಹೊರ ಜಿಲ್ಲೆಯ ಇಬ್ಬರು ಮತ್ತು ಜಿಲ್ಲೆಯ 3 ಜನ ಸೇರಿ 5 ಜನ ಡಿವೈಎಸ್‍ಪಿ ಗಳನ್ನು, 11 ಜನ ಇನ್ಸ್‍ಪೆಕ್ಟರ್‍ಗಳನ್ನು ಮತ್ತು 60 ಕ್ಕೂ ಹೆಚ್ಚು ಪಿಎಸ್‍ಐ, ಎಎಸ್‍ಐ ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಈಗಾಗಲೇ 144 ಕಲಂ ಜಾರಿಯಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ವಹಿಸಲಾಗಿದೆ. ಮತದಾನ ಸಂದರ್ಭದಲ್ಲಿ ಯಾವುದೇ ತೊಂದರೆ ಅಥವಾ ಭಯ ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಚುನಾವಣಾ ಸಹಾಯವಾಣಿ 1950 ಗೆ ಅಥವಾ ಪೊಲೀಸ್ ಸಹಾಯವಾಣಿ, 112 ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Related posts

ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್

eNEWS LAND Team

ಅಣ್ಣಿಗೇರಿ ನೀಲಗುಂದ ಪುಣ್ಯಪುರುಷ ಗುದ್ನೇಶ್ವರ ಶ್ರೀಗಳ ಬಗ್ಗೆ ಇನ್ನಷ್ಟು ಓದಿ ತಿಳಿಯಿರಿ. ರಥೋತ್ಸವಕ್ಕೆ ತಪ್ಪದೇ ನಾಳೆ ಬನ್ನಿ…

eNEWS LAND Team

ಬಿಎಸ್’ವೈ ಜಲರಕ್ಷಣೆ ನೀಡಿದ ಆಧುನಿಕ ಭಗೀರಥ: ಸಿಎಂ ಬೊಮ್ಮಾಯಿ

eNEWS LAND Team