24 C
Hubli
ಸೆಪ್ಟೆಂಬರ್ 27, 2023
eNews Land
ಸುದ್ದಿ

ಒಮಿಕ್ರೋನ್ + ಡೆಲ್ಟಾ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಸಿಎಂ

ಇಎನ್ಎಲ್ ಬೆಳಗಾವಿ: ಕಳೆದ ಒಂದು ವಾರದಲ್ಲಿ ಕರೋನಾ, ಒಮಿಕ್ರಾನ್ ಕೇಸ್ ಹೆಚ್ಚಾಗ್ತಿದೆ. ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಭಾನುವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು. ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು. ಪ್ರಯಾಣಿಕರಿಗೆ ಸಣ್ಣಪ್ರಮಾಣದ ತೊಂದರೆಯಾದರೂ ಬೆಳಗಾವಿ ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಜನರು ಕೊರೋನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸಿ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸಬಾರದು. ಸಧ್ಯದಲ್ಲಿಯೇ ಕರೋನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Related posts

ಡಿ. 17ರಂದು ಕನ್ನಡ ನಾಡು-ನುಡಿ- ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ

eNEWS LAND Team

ಯುನೆಸ್ಕೋ ಪಟ್ಟಿಗೆ ಕೋಲ್ಕತ್ತಾ ದುರ್ಗಾಪೂಜೆ!!

eNewsLand Team

ಸಾಕ್ಷರತಾ ಕಾರ್ಯಕ್ರಮಗಳ ಅನುಷ್ಠಾನ: ಸಾಮೂಹಿಕ ಜವಾಬ್ದಾರಿ

eNEWS LAND Team