27 C
Hubli
ಮೇ 25, 2024
eNews Land
ಸುದ್ದಿ

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸವಿನೆನಪಿಗೆ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಉತ್ಸವ

ಇಎನ್ಎಲ್ ಧಾರವಾಡ: ಜೂನ್ 20, 21 ರಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 75ನೇ ಹುಟ್ಟುಹಬ್ಬದ ಸವಿನೆನಪಿಗಾಗಿ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಉತ್ಸವ–ಸಂಕಲ್ಪ-2023 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದ ಜನತಾ ಶಿಕ್ಷಣ ಸಮಿತಿಯ ಅಂಗ ಸಂಸ್ಥೆಯಾದ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಜೆಎಸ್ಎಸ್ ಸಂಸ್ಥೆಯ ಸನ್ನಿಧಿ ಕಲಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಉತ್ಸವ – ಸಂಕಲ್ಪ-2023 ಆಯೋಜಿಸಿದೆ ಎಂದು ತಿಳಿಸಿದರು.

ಈ ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ಟ್ರೇಸರ್‌ ಹಂಟ್, ಕ್ವಿಜ್, ಅಡ್ವರ್ಟೈಸ್ಟೆಂಟ್, ವಿಡಿಯೋ ಎಡಿಟಿಂಗ್ ಮತ್ತು ಫೋಟೊಗ್ರಾಫಿ ಹಾಗೂ ಕಲ್ಬರಲ್ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪಲ್ಲಾದ ಜೋಶಿಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕರಾದ ವಾಸುಕಿ ವೈಭವ ಆಗಮಿಸಲಿದ್ದಾರೆ ಎಂದು ತಿಳಿಸಿದರು.

Related posts

ಕ್ರೀಡೆಯಲ್ಲಿ ಸಮತೋಲಿತ ಭಾವ ಅಗತ್ಯ : ಮಹಾಪೌರ ಈರೇಶ್ ಅಂಚಟಗೇರಿ

eNewsLand Team

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್ ಬಸ್‌ಪಾಸ್ ಸೌಲಭ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ: ಸಿಎಂ

eNewsLand Team

ಜಿಲ್ಲೆಯ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

eNEWS LAND Team