23.8 C
Hubli
ಮಾರ್ಚ್ 28, 2023
eNews Land
ಸುದ್ದಿ

ಇ-ಶ್ರಮ್ ತಂತ್ರಾಂಶದ ಮೂಲಕ ಅಸಂಘಟಿತ ಕಾರ್ಮಿಕರ‌ ಮಾಹಿತಿ ಸಂಗ್ರಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ

Listen to this article

ಇಎನ್ಎಲ್ ಹುಬ್ಬಳ್ಳಿ .26: ಕೇಂದ್ರ ಸರಕಾರವು ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ಇ-ಶ್ರಮ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಈ ತಂತ್ರಾಂಶ ಬಳಸಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಅಸಂಘಟಿತ ಕಾರ್ಮಿಕ ಮಾಹಿತಿ ಸಂಗ್ರಹಿಸುವ ಕಾರ್ಯವಾಗಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹೇಳಿದರು.

ನ.18 ರಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಭವನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಜಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಇ-ಶ್ರಮ್ ಮಾಹಿತಿ ಸಂಗ್ರಹಣೆಗೆ ಜಿಲ್ಲಾ ಮಟ್ಟದಲ್ಲಿ ಜಾರಿ ಸಮಿತಿ ರಚಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ನಿಟ್ಟಿನಲ್ಲಿ ಪ್ರಸ್ತುತ ಚಾಲಿತ ಗೊಂಡಿರುವ ಇ-ಶ್ರಮ್ ತಂತ್ರಾಂಶವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡಾಟಾಬೇಸ್ ಸಂಗ್ರಹಿಸಲಿದೆ. ಇದರಲ್ಲಿ ಕಾರ್ಮಿಕ ಸಂಘಟನೆಗಳು ನೊಂದಣಿ ಮಾಡಿಕೊಳ್ಳಬೇಕು. ಸಮಾಜದ ವಿವಿಧ ಸ್ತರಗಳಲ್ಲಿ ಅಸಂಘಟಿತರಾಗದೇ ಉಳಿದಿರುವ ಕಾರ್ಮಿಕರ ಸಬಲೀಕರಣಕ್ಕಾಗಿ ವಿವಿಧ ಇಲಾಖೆಗಳು ಸಮನ್ವಯತೆ ಸಾಧಿಸಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು.

ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ ಸ್ಥಳೀಯ ಸಂಸ್ಥೆಗಳಾದ ನಗರಪಾಲಿಕೆ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ ಸಹಭಾಗಿತ್ವದಲ್ಲಿ ನೋಂದಣಿಯ ನಿಗದಿತ ಗುರಿ ಸಾಧನೆಗೆ ಅಗತ್ಯವಿರುವ ಕ್ರಿಯಾ ಯೋಜನೆಯನ್ನು ರಚಿಸಿಕೊಂಡು ನಿರ್ದಿಷ್ಟ ಕಾಲಾವಧಿಯಲ್ಲಿ ಗುರಿ ಸಾಧಿಸಬೇಕು. ಅಲ್ಲದೇ ಕಾರ್ಮಿಕರ ನೋಂದಣಿಯ ಸಂದರ್ಭದಲ್ಲಿ ಕೋವಿಡ್-19ರ ಲಸಿಕಾಕರಣದ ಅಗತ್ಯತೆಯ ಕುರಿತು ಕಾರ್ಮಿಕ ವರ್ಗಕ್ಕೆ ಅರಿವು ಮೂಡಿಸಬೇಕು.ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಹೊಂದಲು ಬಾಕಿಯಿರುವ ಕಾರ್ಮಿಕರಿಗೆ ಲಸಿಕೆ ಪಡೆದುಕೊಳ್ಳಲು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಅವಶ್ಯಕ ಕ್ರಮ ವಹಿಸುವಂತೆ ನಿರ್ದೇಶಿಸಿದರು.

ಸಭೆಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿಯ ಕುರಿತು ವಿವಿಧ ಸಂದೇಹಗಳನ್ನು ವಿವಿಧ ಕಾರ್ಮಿಕ ಸಂಘಗಳ ಮುಖಂಡರುಗಳು ಅಧಿಕಾರಿಗಳೊಂದಿಗೆ ಮುಕ್ತವಾಗಿ ಚರ್ಚಿಸಿದರು. ಕಾರ್ಮಿಕ ಅಧಿಕಾರಿಗಳಾದ
ಲಲಿತಾ ಸಾತೇನಹಳ್ಳಿ, ಮಲ್ಲಿಕಾರ್ಜುನ ಎಸ್ ಜೋಗರ ಸೇರಿದಂತೆ ಮತ್ತಿತರರು ಇದ್ದರು.

Related posts

ಹುಬ್ಬಳ್ಳಿ; ವಿಮಲ್ ಗುಟ್ಕಾ ವಿಚಾರಕ್ಕೆ ಕಳಸ್’ಗೆ ಚೂರಿ ಚುಚ್ಚಿ ಕೊಲೆ ಮಾಡಿದ ಗೌಸ್!!

eNewsLand Team

ಪರಿಸರ ರಕ್ಷಿಸೋಣ : ಟಿಎಂಸಿ ಮುಖ್ಯಾಧಿಕಾರಿ ಗದ್ದಿಗೌಡ್ರ

eNEWS LAND Team

ಅತಿವೃಷ್ಟಿಗಾಗಿ ತುರ್ತು ಸಭೆ : ರೈತ ನೆಮ್ಮದಿಯಿಂದ ಇದ್ದಾಗ ಮಾತ್ರ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ: ಶಾಸಕ ನಿಂಬಣ್ಣವರ

eNEWS LAND Team