24 C
Hubli
ಡಿಸೆಂಬರ್ 7, 2023
eNews Land
ಸುದ್ದಿ

ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ

ಇಎನ್ಎಲ್ ಮೈಸೂರು: ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ವಿಶ್ವ ರೈತ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮಾವೇಶ, ಕುರುಬೂರು ಶಾಂತಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ರೈತಧ್ವನಿ ವಿಶೇಷಾಂಕ ಮತ್ತು ಹಸಿರು ಹೊನ್ನು ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರ್ಕಾರಗಳು ಆಹಾರ ಉತ್ಪಾದನೆ ಕಡೆಗೆ ಗಮನಕೊಟ್ಟಿವೆ. ಆದರೆ ರೈತರ ಆರ್ಥಿಕ ಅಭಿವೃದ್ಧಿಗೆ ಗಮನಕೊಟ್ಟಿಲ್ಲ. ಈ ಸಮಸ್ಯೆ ನಮ್ಮ ಗಮನದಲ್ಲಿದೆ. ಕೃಷಿ ಜೊತೆಗೆ ಪೂರಕ ಕೃಷಿ ಚಟುವಟಿಕೆ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರ ಆದಾಯ ಹೆಚ್ಚಿಸಲು ಸಾಧ್ಯ ಎಂದರು.

ಹಳ್ಳಿಗಳಲ್ಲಿ ಕೃಷಿ ಜೊತೆಗೆ ವ್ಯವಹಾರ ಹೊಂದಿರುವ ಕುಟುಂಬಗಳ ಸ್ಥಿತಿ ಉತ್ತಮವಾಗಿದೆ. ಈ ನಿಟ್ಟಿನಲ್ಲಿ ರೈತರ ಮಕ್ಕಳು ವಿದ್ಯಾವಂತರಾಗಲಿ ಎಂಬ ಉದ್ದೇಶದಿಂದ ಇಡಿ ಭಾರತದಲ್ಲಿ ಪ್ರಥಮವಾಗಿ ರೈತರ ಮಕ್ಕಳಿಗೆ ಕೃಷಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದಿದ್ದೇನೆ ಎಂದರು.

Related posts

ಕನ್ನಡದಲ್ಲಿ ’83’ ಗೆ ಆಸರೆ ಆಗ್ತಿರೋದು ಯಾರು?

eNewsLand Team

SWR: DIVERSION / REGULATION OF TRAINS

eNEWS LAND Team

ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಮುಖ್ಯಮಂತ್ರಿಗಳಿಂದ ಸಾಂತ್ವನ: ₹25 ಲಕ್ಷ ಪರಿಹಾರ

eNEWS LAND Team