23.8 C
Hubli
ಮಾರ್ಚ್ 28, 2023
eNews Land
ಸುದ್ದಿ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

Listen to this article

ಇದನ್ನೂ ಕ್ಲಿಕ್ ಮಾಡಿ ಓದಿ:ಕೆ.ಐ.ಎ ನಲ್ಲಿ ನವೀನ್ ಪಾರ್ಥಿವ ಶರೀರ ಬರಮಾಡಿಕೊಂಡ: ಸಿಎಂ ಬೊಮ್ಮಾಯಿ

ಇಎನ್ಎಲ್ ಹುಬ್ಬಳ್ಳಿ: 2021-22 ನೇ ಸಾಲಿನ ಕರ್ನಾಟಕ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಸಲು ತೀರ್ಮಾನಿಸಿದ್ದು, ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 28-03-2022 ರಿಂದ 11-04-2022 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಧಾರವಾಡದಂವಗ ₹ 5 ಲಕ್ಷ‌ ಸಾಲ ಕೊಡ್ಸುದಾಗಿ ₹ 3 ಲಕ್ಷ ರು. ಟೋಪಿ ಹಾಕ್ಯಾರ ನೋಡಿ!

eNewsLand Team

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

eNewsLand Team

ಮಹಾನಗರ ಪಾಲಿಕೆ ವ್ಯಾಪ್ತಿಯ 2.81 ಲಕ್ಷ ಆಸ್ತಿಗಳ ಇ- ಸ್ವತ್ತು ನೋಂದಣಿಗೆ ಕ್ರಮ

eNewsLand Team