34 C
Hubli
ಮಾರ್ಚ್ 23, 2023
eNews Land
ಸುದ್ದಿ

ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭ

Listen to this article

ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ

ಇಎನ್ಎಲ್ ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ ಒನ್ ಯೋಜನೆ  ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭವಾಗಿದೆ. ಮಾರ್ಚ್ ಇರುವುದು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹತ್ವಾಕಾಂಕ್ಷೆಯ ಗ್ರಾಮ ಒನ್ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯ ಪಡೆಯಲು ಜನರು ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆ ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್ ಕಾರ್ಯಕ್ರಮ ರೂಪಿಸಲಾಗಿದೆ.

ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವಾರು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಿಸುವ ಚಿಂತನೆಯಿಂದ ಗ್ರಾಮ ಒನ್ ಪ್ರಾರಂಭಿಸಲಾಗಿದೆ. ತಾಲೂಕು ಕಚೇರಿಯಲ್ಲಿ ಸೇವೆಗಳಿಗಾಗಿ ಜನಸಂದಣಿ ತಪ್ಪಿಸಲು ಹಾಗೂ ಸೇವೆಗಳ ಪೂರೈಕೆಯಲ್ಲಿ ವಿಕೇಂದ್ರೀಕರಣದ ಉದ್ದೇಶದಿಂದ, ಗ್ರಾಮಮಟ್ಟದಲ್ಲಿಯೂ ಈ ಎಲ್ಲ ಸೇವೆ ಒದಗಿಸಲಾಗುವುದು. ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗೆ ತೆರಳಿ ಗ್ರಾಮ ಒನ್ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಉತ್ತಮ ಸಲಕರಣೆ ,ಸಮರ್ಥ ಹಾಗೂ ಸದೃಢ ತಂತ್ರಜ್ಞಾನದಿಂದ ಯಾವುದೇ ಅಡಚಣೆಗಳಿಲ್ಲದೆ ಗ್ರಾಮೀಣ ಜನರಿಗೆ ಸೇವೆ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಈ ಸೇವೆ ಪ್ರಾರಂಭಿಸಲಾಗಿದ್ದು, ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕು ನಿವಾರಿಸಲಾಗಿದೆ. ಜನರಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಬದಲಾವಣೆ ಇದಾಗಿದೆ. ತಳಮಟ್ಟದಲ್ಲಿ ಸರ್ಕಾರದ ಸೇವೆ ಸಮರ್ಪಕವಾಗಿ ಸುಲಭವಾಗಿ ತಲುಪಿಸಲಾಗುವುದು. ಈ ವ್ಯವಸ್ಥೆಯ ಮೂಲಕ ಸರ್ಕಾರದ ಕಾರ್ಯನಿರ್ವಹಣೆಯ ಮೇಲಿನ ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ ಇದೆ ಎಂದು ತಿಳಿಸಿದರು.

ಗ್ರಾಮ ಒನ್ – ದಕ್ಷ ವ್ಯವಸ್ಥೆಯಾಗಿಸಲು ಸೂಚನೆ:
ಮನೆ ಹೊಲ ಹಕ್ಕು ಪತ್ರಗಳು, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹೀಗೆ ಜನರ ಹತ್ತಾರು ಸೇವೆಗಳ ಅವಶ್ಯಕತೆ ಪೂರೈಸುವ ಪ್ರಯತ್ನವಾಗಿದೆ. ಪ್ರಮುಖ ಸೇವೆಗಳಿಗೆ ಸೀಮಿತಗೊಳಿಸಿ ಅತ್ಯಂತ ದಕ್ಷ ವ್ಯವಸ್ಥೆಯನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವ್ಯವಸ್ಥೆ ನಿರಂತರವಾಗಿ ಸುಧಾರಿಸುವ ಮೂಲಕ ಜನರಿಗೆ ಸಮರ್ಪಕವಾಗಿ ಸೇವೆ ಒದಗಿಸಲಾಗುವುದು ಎಂದರು.

Related posts

ಫಸ್ಟ್ ಟೈಂ ಸೂರ್ಯನ ಮುಟ್ಟಿದ ಮಾನವ ! 

eNewsLand Team

ಜಿಲ್ಲೆಯ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

eNEWS LAND Team

ಉಕ್ರೇನ್’ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಸಿಎಂ

eNewsLand Team