24 C
Hubli
ಮಾರ್ಚ್ 29, 2024
eNews Land
ಅಪರಾಧ ಸುದ್ದಿ

ಎ.ಟಿ.ಎಮ್ ಹಣ ನಿರಾಕರಿಸಿದ ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ ರೂ.2 ಲಕ್ಷದ 24 ಸಾವಿರ ರೂ.ಗಳ ಭಾರಿದಂಡ

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನಸಾರಿ ಎಂಬುವವರು ಬಿಹಾರ ರಾಜ್ಯದ ಮುಝಫರಪುರ್‍ಗೆ ಪ್ರವಾಸಕ್ಕೆ ತೆರಳಿದಾಗ ಅಲ್ಲಿನ ಹೆಚ್.ಡಿ.ಎಫ್.ಸಿ. ಬ್ಯಾಂಕಿನ ಎ.ಟಿ.ಎಮ್ ನಲ್ಲಿರೂ. 10 ಸಾವಿರದಂತೆ ಎರಡು ಬಾರಿ ಹಣತೆಗೆಯಲು ತನ್ನ ಎ.ಟಿ.ಎಮ್. ಕಾರ್ಡ ಬಳಸಿದ್ದರು.ಆದರೆ ಸದರಿ ಎ.ಟಿ.ಎಮ್. ನಿಂದ ಹಣ ಬರದೇ ಇದ್ದರೂ ಅವರ ಉಳಿತಾಯ ಖಾತೆಯಿಂದ ರೂ.20,000/- ಡೆಬಿಟ್ ಆಗಿತ್ತು. ಈ ಬಗ್ಗೆ ದೂರುದಾರ ತನ್ನ ಉಳಿತಾಯ ಖಾತೆ ಇರುವ ಹುಬ್ಬಳ್ಳಿಯ ಅಂಚಟಗೇರಿಯ ಯುನಿಯನ್ ಬ್ಯಾಂಕ್‍ಗೆ ದೂರು ನೀಡಿ ಎ.ಟಿ.ಎಮ್.ತಪ್ಪನ್ನು ಸರಿಪಡಿಸಲು ಕೋರಿದ್ದರು. ಆ ದೂರಿನ ಆಧಾರದ ಮೇಲೆ ಯುನಿಯನ್ ಬ್ಯಾಂಕಿನವರು ಎ.ಟಿ.ಎಮ್. ದೋóóಷದಿಂದ ಬಾರದ ರೂ.20,000/-ಗಳನ್ನು ತಕ್ಷಣ ದೂರುದಾರರ ಖಾತೆಗೆ ಜಮಾ ಮಾಡುವಂತೆ ಎಚ್.ಡಿ.ಎಪ್.ಸಿ. ಬ್ಯಾಂಕ್‍ಗೆ ಪತ್ರ ವ್ಯವಹಾರ ಮಾಡಿದ್ದರು. ಆದರೂ ಸದರಿ ಬ್ಯಾಂಕಿನವರು ರೂ.20,000/-ಗಳ ಹಣ ತನ್ನ ಖಾತೆಗೆ ಜಮಾ ಮಾಡಿಲ್ಲವಾದ್ದರಿಂದ ತನಗೆ ತೊಂದರೆಯಾಗಿ ಆ ಬ್ಯಾಂಕುಗಳಿಂದ ತನಗೆ ಸೇವಾ ನ್ಯೂನ್ಯತೆ ಆಗಿದೆ ಅಂತಾ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ಸಲ್ಲಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಎಚ್.ಡಿ.ಎಫ್.ಸಿ. ಬ್ಯಾಂಕಿನಎ.ಟಿ.ಎಮ್.ಯಂತ್ರದ ದೋಷದಿಂದ ದೂರುದಾರನಿಗೆ ಹಣ ಬಂದಿಲ್ಲ. ಕಾರಣ ಆ ಹಣ ಸದರಿ ಬ್ಯಾಂಕಿನಲ್ಲಿಯೇ ಉಳಿದಿತ್ತು.

ವಕೀಲರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಕಾರ್ಯ ಶ್ಲಾಘನೀಯ -ನ್ಯಾಯಮೂರ್ತಿ ರವಿ ವಿ. ಹೊಸಮನಿ

ಈ ಬಗ್ಗೆ ಯುನಿಯನ್ ಬ್ಯಾಂಕ್ ಶಾಖಾ ವ್ಯವಸ್ಥಾಪಕರು 2019ರಲ್ಲಿ ಎರಡು ಬಾರಿ ಎಪ್.ಟಿ.ಎಸ್. ಸೆಂಟರ್‍ನಿಂದ ಎಚ್.ಡಿ.ಎಪ್.ಸಿ.ಬ್ಯಾಂಕ್‍ನವರನ್ನು ಸಂಪರ್ಕಿಸಿ ದೂರುದಾರನ ಹಣವನ್ನು ಅವನ ಖಾತೆಗೆ ಹಿಂದಿರುಗಿಸಲು ಕೋರಿದ್ದರು. ಆದರೂ ಎಚ್.ಡಿ.ಎಫ್.ಸಿ ಬ್ಯಾಂಕಿನವರು ಘಟನೆ ನಡೆದ ದಿ:17/01/2019 ರಿಂದ ಈ ವರೆಗೆ ಸುಮಾರು 4 ವರ್ಷ ದೂರುದಾರನ ಖಾತೆಗೆ ಹಣ ಜಮಾ ಮಾಡಿರಲಿಲ್ಲ. ಈ ರೀತಿ ಎ.ಟಿ.ಎಮ್ ದೋಷದಿಂದ ಹಣ ಬಾರದ ಪ್ರಸಂಗಗಳಲ್ಲಿ 6 ದಿವಸದೊಳಗಾಗಿ ಸಂಬಂಧಿಸಿದ ಬ್ಯಾಂಕಿನವರು ಕ್ರಮ ಕೈಗೊಂಡು ಗ್ರಾಹಕನ ಖಾತೆಗೆ ತಕ್ಷಣ ಹಣ ಜಮಾ ಮಾಡಬೇಕು. ತಪ್ಪಿದ್ದಲ್ಲಿ 7ನೇ ದಿನದಿಂದ ಜಮಾ ಆಗುವವರೆಗೆ ಪ್ರತಿ ದಿವಸ ರೂ.100/-ಗಳ ಪೆನಾಲ್ಟಿ ಕೊಡಬೇಕು ಅಂತಾ ಆರ್.ಬಿ.ಆಯ್ ಸುತ್ತೋಲೆ ಇದ್ದರೂ ದಿ:17/01/2019 ರಿಂದ ಈವರೆಗೆ ಸುಮಾರು 4 ವರ್ಷಗಳ ಕಾಲ ಹಣ ದೂರುದಾರನ ಖಾತೆಗೆ ಜಮಾ ಮಾಡದೇ ಸದರಿ ಬ್ಯಾಂಕಿನ ಸಿಬ್ಬಂದಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ್ದಾರೆ ಅಂತಾ ತನ್ನ ತೀರ್ಪಿನಲ್ಲಿ ಜಿಲ್ಲಾ ಗ್ರಾಹಕರ ಆಯೋಗ ಅಭಿಪ್ರಾಯಪಟ್ಟಿದೆ. ದಿ:17/01/2019 ರಂದು ಈ ಘಟನೆ ನಡೆದಿದ್ದು ಅದು ಆದ 6 ದಿವಸದ ನಂತರ ದಿ:23/01/2019 ರಿಂದ ಈ ತೀರ್ಪು ನೀಡಿದ ದಿ:03/01/2023ರ ವರೆಗೆ 1441 ದಿವಸಕ್ಕೆ ಪ್ರತಿ ದಿವಸಕ್ಕೆ ರೂ.100/- ರೂಪಾಯಿಯಂತೆ ಲೆಕ್ಕಾ ಹಾಕಿ ಎಚ್.ಡಿ.ಎಪ್ ಸಿ ಬ್ಯಾಂಕಿನವರು ದೂರುದಾರನಿಗೆ ರೂ.1,44,100/-ಗಳ ಪೆನಾಲ್ಟಿ, ರೂ.20,000/-ಗಳ ಎ.ಟಿ.ಎಮ್. ಹಣ, ಮತ್ತು ದೂರುದಾರನಿಗೆ ಆಗಿರುವ ತೊಂದರೆ ಮತ್ತು ಮಾನಸಿಕ ಹಿಂಸೆಗೆ ರೂ.50,000/-ಗಳ ದಂಡ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ಸೇರಿ ಒಟ್ಟು ರೂ.2,24,100/- ಗಳನ್ನು ಶೇ8% ರಂತೆ ಬಡ್ಡಿ ಹಾಕಿ ನೀಡುವಂತೆ ಎಚ್.ಡಿ.ಎಪ್. ಸಿ ಬ್ಯಾಂಕಿಗೆ ಆಯೋಗ ಆದೇಶಿಸಿದೆ.

Related posts

ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯ ಹೆಣ ಬೀಳಿಸಿದ ಪುತ್ರಿ!

eNewsLand Team

ಹುಬ್ಬಳ್ಳಿ ಮಹಿಳೆ ಮಹಾರಾಷ್ಟ್ರದಲ್ಲಿ ಕಿಡ್ನಾಪ್: ಹೆಂಡ್ತಿ ಸುರಕ್ಷತೆಗೆ ಓದಲೇಬೇಕಾದ ಸುದ್ದಿ

eNEWS LAND Team

ಹುಬ್ಬಳ್ಳಿ ಎಂ.ಜಿ. ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಶಾಸಕ ಪ್ರಸಾದ ಅಬ್ಬಯ್ಯ ಸೂಚನೆ

eNewsLand Team